ವಿಜಯಪುರ: ಕೊರೊನಾ ಆತಂಕದ ನಡುವೆಯೂ ದಿನದ 24 ಗಂಟೆಗಳ ಕಾಲ ಕರ್ತವ್ಯ ನಿರ್ವಹಿಸುತ್ತಿರುವ ಚಡಚಣ ಪೊಲೀಸರಿಗೆ ಎಂಇಎಸ್ ಶಿಕ್ಷಣ ಸಂಸ್ಥೆಯಿಂದ ವಿಶೇಷ ಅಭಿನಂದನೆ ಸಲ್ಲಿಸಲಾಯಿತು.
ಜಿಲ್ಲೆಯ ಜನರು ಕೊರೊನಾ ಭೀತಿಯಿಂದ ಸಂಕಷ್ಟದಲ್ಲಿದ್ದಾರೆ. ದೇಶದಲ್ಲಿ ಕಳೆದ 44 ದಿನಗಳಿಂದ ಲಾಕ್ಡೌನ್ ಜಾರಿಯಲ್ಲಿದೆ. ಅಂದಿನಿಂದ ಪೊಲೀಸ್ ಇಲಾಖೆ, ವೈದ್ಯಕೀಯ ಇಲಾಖೆ ಹಾಗೂ ಆಶಾ ಕಾರ್ಯಕರ್ತೆಯರು, ಪೌರಕಾರ್ಮಿಕರು, ಮಾಧ್ಯಮ ಕ್ಷೇತ್ರದವರು ಜೀವದ ಹಂಗು ತೊರೆದು ಕರ್ತವ್ಯ ನಿರ್ವಹಿಸುತ್ತಿದ್ದಾರೆ.