ವಿಜಯಪುರ:ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ 49ನೇ ಹುಟ್ಟುಹಬ್ಬ ಪ್ರಯುಕ್ತ ಇಂದು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಯುವ ಕಾಂಗ್ರೆಸ್ ಸಮಿತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ನೋಟ್ಬುಕ್ ಹಾಗೂ ಪೆನ್ ವಿತರಿಸಲಾಗಿದೆ.
ಮುದ್ದೇಬಿಹಾಳ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮ ಯುವ ಕಾಂಗ್ರೆಸ್ ಸಮಿತಿ ಹಾಗೂ ಎನ್ಎಸ್ಯುಐ ವತಿಯಿಂದ ನಗರದ ಜ್ಞಾನಗಂಗೋತ್ರಿ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ಮತ್ತು ಪೆನ್ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಮುದ್ದೇಬಿಹಾಳ ಯುವ ಕಾಂಗ್ರೆಸ್ ಅಧ್ಯಕ್ಷ ಮಹ್ಮದ್ ರಫೀಕ್ ಶಿರೋಳ ಮಾತನಾಡಿ, ಕಾಂಗ್ರೆಸ್ ಈ ದೇಶದ ಎಲ್ಲ ವರ್ಗದ ಜನರ ಪರವಾಗಿದೆ ಎಂದರು.
ಇದೇ ವೇಳೆ ವಿಜಯಪುರ ಎನ್ಎಸ್ಯುಐ ಜಿಲ್ಲಾಧ್ಯಕ್ಷ ಸದ್ದಾಂ ಕುಟೋಜಿ, ಮುದ್ದೇಬಿಹಾಳ ಯುವ ಕಾಂಗ್ರೆಸ್ ಉಪಾಧ್ಯಕ್ಷ ಯುಸೂಫ್ ನಾಯ್ಕೋಡಿ, ವಿಜಯಪುರ ಯುವ ಕಾಂಗ್ರೆಸ್ ಕಾಯ೯ದರ್ಶಿ ಶರಣು ಚಲವಾದಿ ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು.