ಮುದ್ದೇಬಿಹಾಳ :ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಜನ್ಮದಿನದ ಪ್ರಯುಕ್ತ ಯುವ ಕಾಂಗ್ರೆಸ್ ಹಾಗೂ ಎನ್‌ಎಸ್‌ಯೂಐ ಸಂಘಟನೆ ನೇತೃತ್ವದಲ್ಲಿ ಪಟ್ಟಣದ ಗಣೇಶ ನಗರದಲ್ಲಿ ಬಡ ಕುಟುಂಬಗಳಿಗೆ ದಿನಸಿ ಕಿಟ್ ವಿತರಣೆ ಮಾಡಲಾಯಿತು.
ಮುದ್ದೇಬಿಹಾಳದಲ್ಲಿ ದಿನಸಿ ಕಿಟ್ ವಿತರಿಸಿ ರಾಹುಲ್ ಗಾಂಧಿ ಜನ್ಮ ದಿನಾಚರಣೆ - ಮುದ್ದೇಬಿಹಾಳ ವಿಜಯಪುರ ಲೆಟೆಸ್ಟ್ ನ್ಯೂಸ್
ಕೊರೊನಾ ಹಿನ್ನೆಲೆ ಎಲ್ಲೆಡೆ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕಿದ್ದ ಯುವ ಕಾಂಗ್ರೆಸ್ ಹಾಗೂ ಎನ್‌ಎಸ್‌ಯೂಐ ಕಾರ್ಯಕರ್ತರು ಯಾವುದೇ ನಿಯಮ ಪಾಲಿಸಲಿಲ್ಲ.
ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಮಹಮದ್ ರಫೀಕ ಶಿರೋಳ ಹಾಗೂ ಎನ್‌ಎಸ್‌ಯೂಐ ಜಿಲ್ಲಾಧ್ಯಕ್ಷ ಸದ್ದಾಂ ಕುಂಟೋಜಿ ಮಾತನಾಡಿ, ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿದೆ. ಈ ಸಂದರ್ಭದಲ್ಲಿ ತೊಂದರೆಯಲ್ಲಿರುವ ಬಡವರ ನೆರವಿಗೆ ಧಾವಿಸುವಂತೆ ರಾಹುಲ್ ಗಾಂಧಿ ಅವರು ಕರೆ ನೀಡಿರುವ ಹಿನ್ನೆಲೆಯಲ್ಲಿ ಬಡವರಿಗೆ ದಿನಸಿ ಕಿಟ್ ವಿತರಣೆ ಮಾಡುತ್ತಿದ್ದೇವೆ ಎಂದರು.
ಸಾಮಾಜಿಕ ಅಂತರ ನಿಯಮ ಉಲ್ಲಂಘನೆ :ಕೊರೊನಾ ಹಿನ್ನೆಲೆ ಎಲ್ಲೆಡೆ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕಿದ್ದ ಯುವ ಕಾಂಗ್ರೆಸ್ ಹಾಗೂ ಎನ್‌ಎಸ್‌ಯೂಐ ಕಾರ್ಯಕರ್ತರು ಯಾವುದೇ ನಿಯಮ ಪಾಲಿಸಲಿಲ್ಲ. ಬಡವರಿಗೆ ದಿನಸಿ ಕಿಟ್ ವಿತರಿಸುವ ಸಂದರ್ಭ ಅಂತರ ಕಾಯ್ದುಕೊಳ್ಳದೇ, ಮಾಸ್ಕ್ ಕೂಡಾ ಧರಿಸದಿರುವ ದೃಶ್ಯ ಕಂಡು ಬಂದಿತು.