ವಿಜಯಪುರ: ಸಿಂದಗಿ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಮನಗೂಳಿ ಪರ ಹಾಸ್ಯ ನಟ ರಾಜು ತಾಳಿಕೋಟೆ ಭರ್ಜರಿ ಪ್ರಚಾರ ಮಾಡಿದರು.
ಸಿಂಧಗಿ ಪಟ್ಟಣದ ಮಾಂಗಲ್ಯ ಕಲ್ಯಾಣ ಮಂಟಪದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮತಯಾಚನೆ ಮಾಡಿ ಬಳಿಕ ಮಾತನಾಡಿದ ಅವರು, 'ನೀವು ಬಿಜೆಪಿಗೆ ಮತ ಚಲಾಯಿಸುವ ಮುನ್ನ ನನ್ನ ನೆನೆದು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಮನಗೂಳಿಗೆ ಮತ ಹಾಕಿ. ಅವರು ನಿಮ್ಮ ಸಮಸ್ಯೆಗಳನ್ನು ನಿವಾರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಾರೆ' ಎಂದು ಮತದಾರರಿಗೆ ಸಲಹೆ ನೀಡಿದರು.