ವಿಜಯಪುರ : ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ ಹಾಗೂ 20 ಸಾವಿರ ದಂಡ ವಿಧಿಸಿ, ವಿಜಯಪುರ ಜಿಲ್ಲಾ ವಿಶೇಷ ಪೋಕ್ಸೋ ನ್ಯಾಯಾಲಯ ಶನಿವಾರ ತೀರ್ಪು ನೀಡಿದೆ. ಇಲ್ಲಿನ ಗಾಂಧಿನಗರ ನಿವಾಸಿ ಸಂತೋಷ ಥಾವರು ರಾಠೋಡ್ (22) ಶಿಕ್ಷೆಗೊಳಗಾದ ಆರೋಪಿ.
ವಿಜಯಪುರ: ಅತ್ಯಾಚಾರ ಆರೋಪಿಗೆ 20 ವರ್ಷ ಜೈಲು ಶಿಕ್ಷೆ - ಈಟಿವಿ ಭಾರತ ಕನ್ನಡ ನ್ಯೂಸ್
ವಿಜಯಪುರ ಜಿಲ್ಲೆಯ ಗಾಂಧಿನಗರದಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 20 ಸಾವಿರ ದಂಡ ವಿಧಿಸಿ ಜಿಲ್ಲಾ ವಿಶೇಷ ಪೋಕ್ಸೋ ನ್ಯಾಯಾಲಯ ತೀರ್ಪು ನೀಡಿದೆ.
![ವಿಜಯಪುರ: ಅತ್ಯಾಚಾರ ಆರೋಪಿಗೆ 20 ವರ್ಷ ಜೈಲು ಶಿಕ್ಷೆ rape-accused-sentenced-20-years-prison-by-district-special-pocso-court](https://etvbharatimages.akamaized.net/etvbharat/prod-images/768-512-17102735-thumbnail-3x2-yyy.jpg)
ವಿಜಯಪುರ: ಅತ್ಯಾಚಾರ ಆರೋಪಿಗೆ 20ವರ್ಷ ಜೈಲು ಶಿಕ್ಷೆ
2021ರ ಏಪ್ರಿಲ್ 2ರಂದು ಜಿಲ್ಲೆಯ ಗಾಂಧಿನಗರದ ಬಳಿ ದನ ಮೇಯಿಸುವಾಗ ಅಪ್ರಾಪ್ತೆ ಮೇಲೆ ಆರೋಪಿ ಅತ್ಯಾಚಾರ ಎಸಗಿದ್ದನು. ಈ ಕುರಿತು ವಿಜಯಪುರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡ ವಿಶೇಷ ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶ ರಾಮ ನಾಯಕ, ಸಾಕ್ಷಿ ಪುರಾವೆಗಳನ್ನು ಪರಿಶೀಲಿಸಿ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಿದ್ದಾರೆ. ಸರಕಾರದ ಪರವಾಗಿ ಸರಕಾರಿ ಅಭಿಯೋಜಕ ವಿ.ಜಿ. ಹಗರಗುಂಡ ವಾದ ಮಂಡಿಸಿದರು.
ಇದನ್ನೂ ಓದಿ :8ನೇ ತರಗತಿ ಬಾಲಕಿಯ ಮೇಲೆ ಅತ್ಯಾಚಾರ: ಸಹಪಾಠಿಗಳಿಂದಲೇ ಕೃತ್ಯ!