ವಿಜಯಪುರ:ಮನೆ ಬಳಿ ಆಟವಾಡುತ್ತಿದ್ದ 6 ವರ್ಷದ ಬಾಲಕಿ ಮೇಲೆ ಕಾಮುಕನೋರ್ವ ಅಟ್ಟಹಾಸ ಮೆರೆದಿದ್ದಾನೆ. ಕಂದಮ್ಮನ ಮೇಲೆ ಅತ್ಯಾಚಾರ ಎಸಗಿರುವ ಪಾಪಿ, ಘಟನೆ ಬಳಿಕ ಪರಾರಿ ಆಗಿದ್ದಾನೆ.
ಗೋಲಗುಮ್ಮಟ ಪೊಲೀಸ್ ಠಾಣೆ ವ್ಯಾಪ್ತಿಯ ಬಡಾವಣೆಯಲ್ಲಿ ಮನೆ ಮುಂದೆ ಬಾಲಕಿ ಆಟವಾಡುತ್ತಿದ್ದಳು. ಆಗ ಹುಸೇನಿ ಅಪ್ಜಲಪುರ (21) ಎಂಬಾತನು ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿದ್ದಾನೆ ಎಂದು ಆರೋಪಿಸಿ ಆಕೆಯ ತಂದೆ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.