ಕಲಬುರಗಿ: ಜಿಲ್ಲೆಯಲ್ಲಿಂದು ಕೊರೊನಾಗೆ ಇಬ್ಬರು ಬಲಿಯಾಗಿದ್ದಾರೆ. ತೀವ್ರ ಉಸಿರಾಟ ಸಮಸ್ಯೆಯಿಂದ ಇಬ್ಬರು ವೃದ್ದೆಯರು ಸಾವಿಗೀಡಾಗಿದ್ದಾರೆ. ಇದರೊಂದಿಗೆ ಕೋವಿಡ್ನಿಂದ ಸಾವನ್ನಪ್ಪಿದವರ ಸಂಖ್ಯೆ 308ಕ್ಕೆ ಏರಿಕೆಯಾಗಿದೆ. ಇನ್ನು ಜಿಲ್ಲೆಯಲ್ಲಿ ಇಂದು 31 ಜನರಲ್ಲಿ ಸೊಂಕು ಕಾಣಿಸಿಕೊಂಡಿದ್ದ ಸೋಂಕಿತರ ಸಂಖ್ಯೆ 19549 ಕ್ಕೆ ತಲುಪಿದೆ. ಕೊರೊನಾದಿಂದ 62 ಜನ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾಜ್೯ ಆಗಿದ್ದಾರೆ. ಇದುವರೆಗೆ 18,636 ಜನ ಸೋಂಕಿನಿಂದ ಮುಕ್ತಿ ಹೊಂದಿದ್ದರೆ 605 ಸಕ್ರಿಯ ಪ್ರಕರಣಗಳಿವೆ.
ಕಲಬುರಗಿಯಲ್ಲಿ 31 ಹಾಗೂ ವಿಜಯಪುರದಲ್ಲಿ 128 ಮಂದಿಗೆ ಸೋಂಕು ದೃಢ - ಕಲಬುರಗಿ ಹಾಗೂ ವಿಜಯಪುರ ಜಿಲ್ಲೆಯ ಕೊರೊನಾ ಪ್ರಕರಣಗಳ ವರದಿ
ಕಲಬುರಗಿ ಹಾಗೂ ವಿಜಯಪುರ ಜಿಲ್ಲೆಯ ಕೊರೊನಾ ಪ್ರಕರಣಗಳ ಕುರಿತ ವರದಿ ಇಲ್ಲಿದೆ.
ವಿಜಯಪುರ: ಜಿಲ್ಲೆಯಲ್ಲಿ ಇಂದು 128 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 12,276ಕ್ಕೆ ಏರಿಕೆಯಾಗಿದೆ. ಇಂದು ಕೊರೊನಾದಿಂದ 63 ಜನ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ಕೊರೊನಾದಿಂದ ಗುಣಮುಖರಾದವರ ಸಂಖ್ಯೆ 11627 ಕ್ಕೆ ಏರಿಕೆಯಾಗಿದೆ.
ಕೊರೊನಾ ಸೋಂಕಿನಿಂದ ಇಂದು ಒಬ್ಬರು ಮೃತಪಟ್ಟಿದ್ದು, ಇಲ್ಲಿವರೆಗೆ ಒಟ್ಟು 192 ಸಾವಿಗೀಡಾಗಿದ್ದಾರೆ. ವಿಜಯಪುರ ಜಿಲ್ಲಾಸ್ಪತ್ರೆ, ನಾನಾ ಖಾಸಗಿ ಆಸ್ಪತ್ರೆಗಳಲ್ಲಿ 457 ಜನರಿಗೆ ಚಿಕಿತ್ಸೆ ಮುಂದುವರೆಸಲಾಗಿದೆ. ಇಲ್ಲಿಯವರೆಗೆ 1,37,521 ಜನರ ಮೇಲೆ ನಿಗಾ ಇಡಲಾಗಿದೆ. 1,36,141 ಜನರ ಸ್ಯಾಂಪಲ್ ಪಡೆಯಲಾಗಿದೆ. ಇವರಲ್ಲಿ 1,23,172 ಜನರ ವರದಿ ನೆಗಟಿವ್ ಆಗಿದೆ. 12,276 ಜನರಿಗೆ ಪಾಸಿಟಿವ್ ದೃಢಪಟ್ಟಿದೆ. ಇನ್ನೂ 697 ಜನರ ವರದಿ ಬರಬೇಕಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ತಿಳಿಸಿದ್ದಾರೆ.