ವಿಜಯಪುರ: ಲಾಕ್ಡೌನ್ನಿಂದಾಗಿ ಸಂಕಷ್ಟದಲ್ಲಿರುವ ಬಡವರ ವಿದ್ಯುತ್ ಬಿಲ್ ಮನ್ನಾ ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಬಿಪಿಎಲ್ ಕಾರ್ಡ್ದಾರರ ವಿದ್ಯುತ್ ಬಿಲ್ ಮನ್ನಾ ಮಾಡುವಂತೆ ಕರವೇ ಮನವಿ - ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಕರವೇ
ಬಿಪಿಎಲ್ ಕಾರ್ಡ್ದಾರರ ಎರಡು ತಿಂಗಳ ವಿದ್ಯುತ್ ಬಿಲ್ ಮನ್ನಾ ಮಾಡುವಂತೆ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಕರವೇ ಕಾರ್ಯಕರ್ತರು ಮನವಿ ಸಲ್ಲಿಸಿದರು.
ಕರವೇ ಮನವಿ
ಲಾಕ್‌ಡೌನ್ ಘೋಷಿಸಿದ ದಿನದಿಂದ ದುಡಿಯುವ ಕೈಗಳಿಗೆ ಕೆಲಸವಿಲ್ಲದೆ ಸಂಕಷ್ಟ ಅನುಭವಿಸುತ್ತಿವೆ. ಬಡವರು ಮನೆ ನಿರ್ವಹಣೆ ಮಾಡಲಾಗದೆ ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಹೀಗಾಗಿ ಬಿಪಿಎಲ್ ಕಾರ್ಡ್ದಾರರಿಗೆ ಎರಡು ತಿಂಗಳ ವಿದ್ಯುತ್ ಬಿಲ್ ಮನ್ನಾ ಮಾಡುವಂತೆ ಆಗ್ರಹಿಸಿದರು.