ವಿಜಯಪುರ :ಸಾರ್ವಜನಿಕ ಸಭೆ-ಸಮಾರಂಭಗಳಿಗೆ ಹಾಗೂ ಮದುವೆ ಕಾರ್ಯಕ್ರಮಗಳಿಗೆ 200 ರಿಂದ 300 ಜನರಿಗೆ ಪಾಲ್ಗೊಳ್ಳಲು ಅವಕಾಶ ನೀಡುವಂತೆ ಮಂಟಪ, ಡೆಕೊರೇಟರ್, ಸೌಂಡ್ ಸಿಸ್ಟಮ್ ಮಾಲೀಕರ ಸಂಘಟನೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ.
ಕೊರೊನಾ ವೈರಸ್ ಭೀತಿಯಿಂದ ಕಾರ್ಯಕ್ರಮಗಳಿಲ್ಲದೆ ಹಾಗೂ ದುಡಿಮೆಯಿಲ್ಲದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಶಾಮಿಯಾನ ಮಾಲೀಕರಿಗೆ ಸರ್ಕಾರ ಸರಿಯಾಗಿ ಪರಿಹಾರ ಒದಗಿಸಲು ಮುಂದಾಗಿಲ್ಲ. ದುಡಿಮೆ ನಂಬಿ ಮಾಡಿಕೊಂಡ ಸಾಲ ಮರುಪಾವತಿ ಮಾಡಲಾಗುತ್ತಿಲ್ಲ. ಕುಟುಂಬ ನಿರ್ವಹಣೆ ಮಾಡಲು ಪರದಾಟ ನಡೆಸುವ ಅನಿವಾರ್ಯತೆ ಎದುರಾಗಿದೆ. ಲಾಕ್‌ಡೌನ್ ತೆರವಿನ ಬಳಿಕವೂ ದುಡಿಮೆಯಿಂದ ಆದಾಯ ಬರುತ್ತಿಲ್ಲ ಎಂದು ತಮ್ಮ ಅಳಲನ್ನು ತೋಡಿಕೊಂಡರು.