ಕರ್ನಾಟಕ

karnataka

ETV Bharat / state

ಮುದ್ದೇಬಿಹಾಳ: ಗುಣಮಟ್ಟದ ರಸ್ತೆ ಕಾಮಗಾರಿಗೆ ಮನವಿ - Muddebihal cc road construction work

ಮುದ್ದೇಬಿಹಾಳದಲ್ಲಿ ಗುಣಮಟ್ಟದ ಕಾಮಗಾರಿ ನಡೆಸಬೇಕು ಎಂದು ಆಗ್ರಹಿಸಿ ಪುರಸಭೆ ಮುಖ್ಯಾಧಿಕಾರಿಗಳಿಗೆ ವಾರ್ಡ್ ನಿವಾಸಿಗಳು ಮನವಿ ಸಲ್ಲಿಸಿದರು.

ಮನವಿ ಪತ್ರ
ಮನವಿ ಪತ್ರ

By

Published : Aug 8, 2020, 12:30 PM IST

ಮುದ್ದೇಬಿಹಾಳ : ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಲಕ್ಷ್ಮಿ ಗುಡಿಯವರೆಗೆ ನಡೆಯುತ್ತಿರುವ ಸಿಸಿ ರಸ್ತೆ ಕಾಮಗಾರಿಯು ಅವೈಜ್ಞಾನಿಕ ಮತ್ತು ಕಳಪೆಯಿಂದ ಕೂಡಿದ್ದು, ಗುಣಮಟ್ಟದ ಕಾಮಗಾರಿ ನಡೆಸಬೇಕು ಎಂದು ಆಗ್ರಹಿಸಿ ಪುರಸಭೆ ಮುಖ್ಯಾಧಿಕಾರಿಗಳಿಗೆ ವಾರ್ಡ್ ನಿವಾಸಿಗಳು ಮನವಿ ಪತ್ರ ಸಲ್ಲಿಸಿದರು.

ಪಟ್ಟಣದ ಪುರಸಭೆಗೆ ಆಗಮಿಸಿದ ವಾರ್ಡ್ ನಿವಾಸಿಗಳು, ಮುಖ್ಯಮಂತ್ರಿಗಳ ಎಸ್.ಎಫ್.ಸಿ ಅನುದಾನದಲ್ಲಿ ಸಿಸಿ ರಸ್ತೆ ನಿರ್ಮಿಸಲಾಗುತ್ತಿದ್ದು, ಸದರಿ ರಸ್ತೆ ಕಾಮಗಾರಿಯನ್ನು ಅವೈಜ್ಞಾನಿಕವಾಗಿ ಮಾಡಲಾಗುತ್ತಿದೆ. ಇದರಿಂದ ರಸ್ತೆ ಪಕ್ಕದಲ್ಲಿ ಇರುವ ಮನೆಗಳಿಗೆ ಮಳೆ ನೀರು ನುಗ್ಗಿ ತೊಂದರೆಯಾಗುತ್ತದೆ ಎಂದು ದೂರಿದರು.

ರಸ್ತೆ ಸರಿಯಾಗಿ ಅಗಿಯದೇ ಹಾಗೆಯೇ ಸಿಸಿ ರಸ್ತೆ ನಿರ್ಮಿಸುತ್ತಿದ್ದಾರೆ. ಕೂಡಲೇ ಅಕಪಕ್ಕದ ಮನೆಗಳಿಗೆ ನೀರು ಹೋಗದಂತೆ ಈಗಿರುವ ರಸ್ತೆಯನ್ನು 6 ಇಂಚು ಅಗೆದು, ರಸ್ತೆ ನಿರ್ಮಾಣ ಮಾಡಬೇಕು. ಒಂದು ವೇಳೆ ರಸ್ತೆಯ ನೀರು ಮನೆಯೊಳಗಡೆ ನುಗ್ಗಿದರೆ ಪುರಸಭೆ ಎದುರು ಪ್ರತಿಭಟನೆ ನಡೆಸುತ್ತೇವೆ ಎಂದು ಮನವಿ ಪತ್ರವನ್ನು ಪುರಸಭೆ ಮುಖ್ಯಾಧಿಕಾರಿ ಗೋಪಾಲ ಕಾಸೆ ಅವರಿಗೆ ನೀಡಿದರು.

ಈ ಸಂದರ್ಭದಲ್ಲಿ ನಿವಾಸಿಗಳಾದ ಸದ್ದಾಂಹುಸೇನ್​​ ನದಾಫ್​, ಬಸಪ್ಪ ಸಜ್ಜನ, ಸೋಮು ಸಜ್ಜನ, ಎಸ್.ಬಿ.ಮಡಿವಾಳರ, ಸಂಗಣ್ಣ ಮೇಲಿನಮನಿ, ಮಾನಶೆಪ್ಪ ನಾಯ್ಕಮಕ್ಕಳ ಉಪಸ್ಥಿತರಿದ್ದರು.

ABOUT THE AUTHOR

...view details