ವಿಜಯಪುರ:ಮುಳವಾಡ ಕೈಗಾರಿಕಾ ಪ್ರದೇಶದಲ್ಲಿ ಪರಿಶಿಷ್ಟ ಪಂಗಡ , ಪರಿಶಿಷ್ಟ ಜಾತಿ ಸಮುದಾಯದಗಳಿಗೆ ನಿವೇಶನ ಹಂಚಿಕೆ ಮಾಡುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ
ಎಸ್‌ಸಿ - ಎಸ್‌ಟಿ ಸಮುದಾಯಗಳಿಗೆ ನಿವೇಶನ ಹಂಚಿಕೆ ಮಾಡಲು ಒತ್ತಾಯ - ಮುಳವಾಡ ಕೈಗಾರಿಕಾ ಪ್ರದೇಶ
ಮುಳವಾಡ ಕೈಗಾರಿಕಾ ಪ್ರದೇಶದಲ್ಲಿ ನಿವೇಶನ ಹಂಚಿಕೆ ಮಾಡಲು ಕ್ರಮಕ್ಕೆ ಮುಂದಾಬೇಕು. ಫಲಾನುಭವಿಗಳಿಗೆ ಏಕಗವಾಕ್ಷಿ ಸಭೆಯಲ್ಲಿ ನಿವೇಶನ ಹಂಚಿಕೆ ಕುರಿತು ನಿರ್ಣಯ ಕೈಗೊಳ್ಳುವಂತೆ ದಲಿತ ಪರ ಸಂಘಟನೆ ಕಾರ್ಯಕರ್ತರು ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದೆ.
![ಎಸ್‌ಸಿ - ಎಸ್‌ಟಿ ಸಮುದಾಯಗಳಿಗೆ ನಿವೇಶನ ಹಂಚಿಕೆ ಮಾಡಲು ಒತ್ತಾಯ Mulawada industrial area](https://etvbharatimages.akamaized.net/etvbharat/prod-images/768-512-8535634-757-8535634-1598257714265.jpg)
ಈಗಾಗಲೇ ಕೈಗಾರಿಕಾ ಪ್ರದೇಶದ ಜಾಗ ಪರಿವೀಕ್ಷಣೆ ಮಾಡಲಾಗಿದೆ. ಮೂಲ ಸೌಕರ್ಯ ಅಭಿವೃದ್ಧಿ ಮಾಡಲಾಗುತ್ತಿದ್ದು, ಕೆಲವೇ ದಿನಗಳಲ್ಲಿ ಪೂರ್ಣಗೊಳ್ಳುವ ಹಂತದಲ್ಲಿದೆ. ಎಸ್‌ಸಿ ಎಸ್‌ಟಿ ಸಮುದಾಯಗಳಿಗೆ ಶೇ 75 ರಿಯಾಯಿತಿಯಲ್ಲಿ ನಿವೇಶನ ಹಂಚಿಕೆ ಮಾಡುವಂತೆ ಸರ್ಕಾರ ಆದೇಶವಿದ್ದು, ಗವಾಕ್ಷಿ ಸಮಿತಿಯಲ್ಲಿ ನಿರ್ಣಯ ಕೈಗೊಳ್ಳುವಂತೆ ಸರ್ಕಾರಕ್ಕೆ ದಲಿತ ಸಂಘಟನೆ ಕಾರ್ಯಕರ್ತರು ಒತ್ತಾಯಿಸಿದ್ದಾರೆ
ಪರಿಶಿಷ್ಟ ಪಂಗಡ ಹಾಗೂ ಪರಿಶಿಷ್ಟ ಜಾತಿಗಳು ಶೇ 25 ಹಣವನ್ನು ಆಡಳಿತ ಮಂಡಳಿಗೆ 8 ಕಂತುಗಳಲ್ಲಿ 2 ವರ್ಷಗಳ ಅವಧಿಯಲ್ಲಿ ಪಾವತಿಸಲು ಅವಕಾಶವಿದೆ. ಅಧಿಕಾರಿಗಳು ಮುಳವಾಡ ಕೈಗಾರಿಕಾ ಪ್ರದೇಶದಲ್ಲಿ ನಿವೇಶನ ಹಂಚಿಕೆ ಮಾಡಲು ಕ್ರಮಕ್ಕೆ ಮುಂದಾಬೇಕು. ಫಲಾನುಭವಿಗಳಿಗೆ ಏಕಗವಾಕ್ಷಿ ಸಭೆಯಲ್ಲಿ ನಿವೇಶನ ಹಂಚಿಕೆ ಕುರಿತು ನಿರ್ಣಯ ಕೈಗೊಳ್ಳುವಂತೆ ದಲಿತ ಪರ ಸಂಘಟನೆ ಕಾರ್ಯಕರ್ತರು ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.