ವಿಜಯಪುರ: ಲಾಕ್‌ಡೌನ್ ಸಂಕಷ್ಟದಲ್ಲಿರುವ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳ ಶೈಕ್ಷಣಿಕ ಶುಲ್ಕವನ್ನು ಸರ್ಕಾರ ಭರಿಸುವಂತೆ ಕೋರಿ ಎಐಡಿಎಸ್‌ಒ ಸಂಘಟನೆ ಸದಸ್ಯರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಕೊರೊನಾ ಭೀತಿಯಿಂದ ರಾಜ್ಯದಲ್ಲಿ ಬಡ ಕಟುಂಬಗಳ ದುಡಿಯುವ ಕೈಗಳಿಗೆ ಕೆಲಸವಿಲ್ಲದೆ ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆ. ಸಂಕಷ್ಟದ ಪರಿಣಾಮ ಬಡ ವಿದ್ಯಾರ್ಥಿಗಳಿಗೆ ತಟ್ಟಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಶುಲ್ಕ ರಾಜ್ಯ ಸರ್ಕಾರ ಭರಿಸುವಂತೆ ಎಐಡಿಎಸ್‌ಒ ಸಂಘಟನೆಯ ಕಾರ್ಯಕರ್ತರು ಮನವಿ ಮಾಡಿದರು.
ವಿದ್ಯಾರ್ಥಿಗಳ ಶೈಕ್ಷಣಿಕ ಶುಲ್ಕವನ್ನು ಸರ್ಕಾರ ಭರಿಸುವಂತೆ ಕೋರಿ ಮನವಿ ಹಾಗೆಯೇ ವಿವಿಗಳ ಪರೀಕ್ಷಾ ಶುಲ್ಕ ರದ್ದುಗೊಳಿಸುಬೇಕು. ಸರ್ಕಾರ ವಿದ್ಯಾರ್ಥಿ ವೇತನ ಹೆಚ್ಚುಸುವ ಕ್ರಮಕ್ಕೆ ಮುಂದಾಗಬೇಕು. ಉಚಿತ ಬಸ್ ಪಾಸ್ ಘೋಷಣೆ ಮಾಡುವಂತೆ ಜಿಲ್ಲಾಧಿಕಾರಿಗೆ ಮನವಿ ಮಾಡಿದರು.
ಹಲವು ವಿದ್ಯಾರ್ಥಿಗಳಿಗೆ ತಾಂತ್ರಿಕ ದೋಷಗಳಿಂದ ಆನ್‌ಲೈನ್ ಶಿಕ್ಷಣ ತಲುಪುತ್ತಿಲ್ಲ. ಆನ್‌ಲೈನ್ ಪಾಠಗಳು ಬಡ ವಿದ್ಯಾರ್ಥಿಗಳಿಗೆ ಕಷ್ಟವಾಗಿದೆ. ಸರ್ಕಾರ ಆನ್‌ಲೈನ್ ಪರೀಕ್ಷಾ ಪದ್ಧತಿ ಜಾರಿ ಮಾಡಬಾರದು. ಕ್ವಾರಂಟೈನ್ಗೆ ಬಳಸಲಾದ ಶಾಲೆ, ಹಾಸ್ಟೆಲ್‌ಗಳನ್ನು ಸ್ಯಾನಿಟೈಸರ್‌ನಿಂದ ಶುಚಿಗೊಳಿಸುವಂತೆ ಕೋರಿ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.