ವಿಜಯಪುರ:ಕ್ಯಾಂಟರ್ ಮತ್ತು ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಕ್ಯಾಂಟರ್ ಚಾಲಕ ಹಾಗೂ ಕ್ಲೀನರ್ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಿಂದಗಿ ತಾಲೂಕಿನ ಚಿಕ್ಕಸಿಂದಗಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ನಡೆದಿದೆ.
ಚಿಕ್ಕಸಿಂದಗಿ ಬಳಿ ಕ್ಯಾಂಟರ್ ಮತ್ತು ಲಾರಿ ಮುಖಾಮುಖಿ ಡಿಕ್ಕಿ: ಚಾಲಕ, ಕ್ಲೀನರ್ ದುರ್ಮರಣ - ವಿಜಯಪುರ ರಸ್ತೆ ಅಪಘಾತ
ವಿಜಯಪುರದ ಸಿಂದಗಿ ತಾಲೂಕಿನ ಚಿಕ್ಕಸಿಂದಗಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಕ್ಯಾಂಟರ್ ಮತ್ತು ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕ್ಯಾಂಟರ್ ಚಾಲಕ ಹಾಗೂ ಕ್ಲೀನರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ವಿಜಯಪುರ ರಸ್ತೆ ಅಪಘಾತ
ಕ್ಯಾಂಟರ್ ಚಾಲಕ ಹಾಗೂ ಕ್ಲೀನರ್ ಮೃತದೇಹಗಳನ್ನು ಹೊರ ತೆಗೆಯಲಾಗಿದ್ದು, ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಇನ್ನೊಂದು ಲಾರಿ ಚಾಲಕನನ್ನು ಸಿಂದಗಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ 50ರ ಬೈ ಪಾಸ್ನ ಚಿಕ್ಕಸಿಂದಗಿ ಬಳಿ ಕ್ಯಾಂಟರ್ ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಈ ದುರ್ಘಟನೆ ನಡೆದಿದೆ. ಟ್ಯಾಂಕರ್ ವಾಹನ ಯಾದಗಿರಿ ಜಿಲ್ಲೆಯದೆಂದು ತಿಳಿದು ಬಂದಿದೆ.
ಈ ಸಂಬಂಧ ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.