ಕರ್ನಾಟಕ

karnataka

ETV Bharat / state

ವಿಜಯಪುರ: ರಸ್ತೆ ಅಪಘಾತದಲ್ಲಿ ಯುವಕ ಸಾವು - ಬೈಕ್​ಗೆ ಲಾರಿ ಡಿಕ್ಕಿ

ಕೊಲ್ಹಾರ ತಾಲೂಕಿನ ಮುಳವಾಡ ಬಳಿ ಬೈಕ್​ಗೆ ಲಾರಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

road Accident
ಯುವಕ ಸಾವು

By

Published : Jan 27, 2021, 9:50 AM IST

ವಿಜಯಪುರ:ಬೈಕ್​ಗೆ ಲಾರಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕೊಲ್ಹಾರ ತಾಲೂಕಿನ ಮುಳವಾಡ ಬಳಿ ನಡೆದಿದೆ.

ಅಪಘಾತದಲ್ಲಿ ಮೃತಪಟ್ಟ ಯುವಕ

ಟಕ್ಕಳಗಿ ಗ್ರಾಮದ ನಿವಾಸಿ ಸುನೀಲ ಪೂಜಾರಿ (20) ಮೃತ ಯುವಕ. ಕಳೆದ ರಾತ್ರಿ ಸುನೀಲ ಪೂಜಾರಿ ಬೈಕ್ ನಲ್ಲಿ ಹೋಗುತ್ತಿದ್ದಾಗ ಎದುರಿಗೆ ಬಂದ ಲಾರಿ ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡು ಆತ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

ಘಟನೆ ಬಗ್ಗೆ ಬಬಲೇಶ್ವರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details