ಮುದ್ದೇಬಿಹಾಳ(ವಿಜಯಪುರ):ನಮ್ಮವರೇಉತ್ತರ ಕರ್ನಾಟಕ ಭಾಗದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಧ್ವನಿಯಾಗಬೇಕು ಎಂಬ ಹಿನ್ನೆಲೆಯಲ್ಲಿ ಕಾಂಗ್ರೆಸ್ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಸ್ಪರ್ಧೆ ಮಾಡಿದ್ದೇನೆ ಎಂದು ಡಿಸಿಸಿ ಬ್ಯಾಂಕ್ ನಿರ್ದೇಶಕಿ ಸಂಯುಕ್ತಾ ಪಾಟೀಲ ಹೇಳಿದರು.
ಕಾಂಗ್ರೆಸ್ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಸಂಯುಕ್ತಾ ಪಾಟೀಲ ಸ್ಪರ್ಧೆ - Muddebihala of Vijayapur District
ಕಾಂಗ್ರೆಸ್ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಸ್ಪರ್ಧೆ ಮಾಡಿದ್ದೇಕೆ ಎಂಬ ವಿಚಾರವನ್ನು ಡಿಸಿಸಿ ಬ್ಯಾಂಕ್ ನಿರ್ದೇಶಕಿ ಸಂಯುಕ್ತಾ ಪಾಟೀಲ ತಿಳಿಸಿದರು.
ಪುರಸಭೆ ಮಾಜಿ ಅಧ್ಯಕ್ಷ ಬಸನಗೌಡ ಪಾಟೀಲ, ಮಾಜಿ ಸದಸ್ಯ ಹೆಚ್.ಬಿ.ಸಾಲಿಮನಿ(ಪಿಂಟು) ಮಾತನಾಡಿ, ಮಾಜಿ ಸಚಿವರು, ಶಾಸಕ ಶಿವಾನಂದ ಪಾಟೀಲ ಅವರ ಮಾರ್ಗದರ್ಶನದಲ್ಲಿ ರಾಜಕೀಯವಾಗಿ ಬೆಳೆಯುತ್ತಿರುವ ಸಂಯುಕ್ತಾ ಪಾಟೀಲ ಅವರು ಭವಿಷ್ಯದಲ್ಲಿ ಜಿಲ್ಲೆಯಲ್ಲಿ ಪ್ರಬಲ ನಾಯಕಿಯಾಗಿ ಬೆಳೆಯುವುದರಲ್ಲಿ ಸಂದೇಹವಿಲ್ಲ. ಪಕ್ಷದ ಕಾರ್ಯಕರ್ತರು ಅವರಿಗೆ ಬೆಂಬಲಿಸಿ ಕೈ ಬಲಪಡಿಸಬೇಕು ಎಂದು ಹೇಳಿದರು.
ಎಪಿಎಂಸಿ ಮಾಜಿ ಅಧ್ಯಕ್ಷ ಗುರು ತಾರನಾಳ, ಜಿಲ್ಲಾ ಯುವ ಘಟಕದ ಉಪಾಧ್ಯಕ್ಷ ಮಲ್ಲಿಕಾರ್ಜುನ ನಾಡಗೌಡ, ಎನ್ಎಸ್ಯುಐ ಅಧ್ಯಕ್ಷ ಸದ್ದಾಂ ಕುಂಟೋಜಿ, ಯುವ ಘಟಕದ ಅಧ್ಯಕ್ಷ ಮಹ್ಮದ್ ರಫೀಕ ಶಿರೋಳ, ಸಚಿನ್ ಗೌಡ ಪಾಟೀಲ, ಹುಸೇನ್ ಮುಲ್ಲಾ, ಲಕ್ಷ್ಮಣ ಲಮಾಣಿ ಇದ್ದರು.