ಕರ್ನಾಟಕ

karnataka

ETV Bharat / state

ಸ್ವಾಮೀಜಿಗಳ ವಸ್ತ್ರದ ಬಗ್ಗೆ ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ: ಮನಗೂಳಿ ಸಂಗನಬಸವ ಶ್ರೀ ಕಿಡಿ - ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ ಮನಗೂಳಿ ಸಂಗನಬಸವ ಶ್ರೀ ಆಕ್ರೋಶ

ಸ್ವಾಮೀಜಿಗಳ ವಸ್ತ್ರದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಸಿದ್ಧರಾಮಯ್ಯ ವಿರುದ್ಧ ಮಠಾಧೀಶರು ರೊಚ್ಚಿಗೆದ್ದಿದ್ದಾರೆ. ಅಲ್ಲದೇ ಬಿಜೆಪಿ ನಾಯಕರು ಸಹ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Sanganabasava Swamiji
ವಿಜಯಪುರ ಮನಗೂಳಿ ಮಠದ ಸಂಗನಬಸವ ಶ್ರೀ

By

Published : Mar 26, 2022, 12:21 PM IST

ವಿಜಯಪುರ:ಹಿಜಾಬ್​ ವಿವಾದದ ಬಗ್ಗೆ ಮಾತಾಡುವಾಗ ಹಿಂದೂ ಹೆಣ್ಣು ಮಕ್ಕಳು ತಲೆ ಮೇಲೆ ಸೆರಗು ಹಾಕಿ ಕೊಳ್ಳಲ್ವಾ?. ಸ್ವಾಮೀಜಿಗಳು ತಲೆ ಮೇಲೆ ಬಟ್ಟೆ ಹಾಕಿಕೊಳ್ತಾರೆ. ಅದನ್ನು ನೀವು ಪ್ರಶ್ನೆ ಮಾಡುತ್ತೀರಾ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದರು. ಅವರ ಹೇಳಿಕೆಗೆ ಸ್ವಾಮೀಜಿಗಳು ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಹಾಗೆ ಮನಗೂಳಿ ಮಠದ ಸಂಗನಬಸವ ಶ್ರೀಗಳು ಕೂಡ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ವಿಜಯಪುರ ಮನಗೂಳಿ ಮಠದ ಸಂಗನಬಸವ ಶ್ರೀ..

ರಾಜ್ಯದಲ್ಲಿ ಸ್ವಾಮೀಜಿಗಳು ಏನು‌ ಕೆಲಸ ಮಾಡುತ್ತಿದ್ದಾರೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ‌ಇದೇ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ವೀರಶೈವ ಲಿಂಗಾಯತ ಧರ್ಮವನ್ನು ಒಡೆಯಲು ಹೋಗಿ ತೀವ್ರ ಹಿನ್ನೆಡೆ ಅನುಭವಿಸಿದ್ದರಲ್ಲದೇ, ಅಧಿಕಾರ ಕಳೆದುಕೊಳ್ಳಬೇಕಾಯಿತು. ಈಗ ಮತ್ತೆ ಸ್ವಾಮೀಜಿಗಳ ಬಗ್ಗೆ ಹಗುರವಾಗಿ ಮಾತನಾಡಿರುವದು ಸರಿಯಲ್ಲ.

ಸಿದ್ದರಾಮಯ್ಯ ಆಪ್ತ ಸಿ.ಎಂ.ಇಬ್ರಾಹಿಂ ಅವರೇ ಸ್ವಾಮೀಜಿಗಳು ಇರದಿದ್ದರೆ ನಮ್ಮ ಸಮಾಜ ಎಲ್ಲಿರುತ್ತಿತ್ತು ಎಂದು ಹೇಳಿದ್ದಾರೆ. ಈಗ ಅಂತಹ ಸ್ವಾಮೀಜಿಗಳ ಬಗ್ಗೆ ಹಗುರವಾಗಿ ಮಾತನಾಡಿರುವುದು ಸರಿಯಲ್ಲ. ಕೂಡಲೇ ಈ ಬಗ್ಗೆ ಸ್ಪಷ್ಟನೆ ನೀಡಬೇಕು. ಇಲ್ಲವಾದರೆ ರಾಜ್ಯದ ಜನತೆ ಅವರನ್ನು ರಾಜ್ಯದಿಂದಲೇ ಹೊರ ಹಾಕುತ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ:ನಾನು ಸ್ವಾಮೀಜಿಗಳಿಗೆ ಅವಮಾನ ಮಾಡಿಲ್ಲ, ಅಗೌರವ ತೋರಿಲ್ಲ: ಸಿದ್ದರಾಮಯ್ಯ ಸ್ಪಷ್ಟನೆ

ABOUT THE AUTHOR

...view details