ವಿಜಯಪುರ: ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಜಿಲ್ಲಾಧಿಕಾರಿ ಕಚೇರಿಗೆ ಮಹಾನಗರ ಪಾಲಿಕೆ ಸಿಬ್ಬಂದಿ ಸ್ಯಾನಿಟೈಸರ್ ಸಿಂಪಡಣೆ ಮಾಡಿದರು.
ವಿಜಯಪುರ ಜಿಲ್ಲಾಧಿಕಾರಿ ಕಚೇರಿ ಸ್ಯಾನಿಟೈಸ್ - Vijayapura
ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಜಿಲ್ಲಾಧಿಕಾರಿ ಕಚೇರಿಗೆ ಮಹಾನಗರ ಪಾಲಿಕೆ ಸಿಬ್ಬಂದಿ ಸ್ಯಾನಿಟೈಸರ್ ಸಿಂಪಡಣೆ ಮಾಡಿದರು.
ದಿನದಿಂದ ದಿನಕ್ಕೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಅನೇಕ ಜನರು ಕಚೇರಿ ಕೆಲಸ ಕಾರ್ಯಗಳಿಗಾಗಿ ಭೇಟಿ ನೀಡುತ್ತಿರುವ ಕಾರಣ ಸಿಬ್ಬಂದಿಗೆ ವೈರಸ್ ಭೀತಿ ಎದುರಾಗದಿರಲೆಂದು ಮಹಾನಗರ ಪಾಲಿಕೆ ಸಿಬ್ಬಂದಿ ಜಿಲ್ಲಾಧಿಕಾರಿ ಕಚೇರಿಗೆ ಸ್ಯಾನಿಟೈಸರ್ ಸಿಂಪಡಣೆ ಮಾಡಿದರು. ಕಚೇರಿಯ 2 ಮಹಡಿಗಳ ಗೋಡೆಗಳು, ಕೋಣೆಗಳು ಸೇರಿದಂತೆ ಕಟ್ಟಡಕ್ಕೆ ಪಾಲಿಕೆಯವರಿಂದ ರಾಸಾಯನಿಕ ಸಿಂಪಡಣೆ ಮಾಡಲಾಯಿತು.
ಜಿಲ್ಲೆಯಲ್ಲಿ ಕೊರೊನಾ ಹಾವಳಿ ಹೆಚ್ಚಾದ ಬೆನ್ನಲ್ಲೇ ಜಿಲ್ಲಾಡಳಿತದ ಕಚೇರಿಗೆ ಕೊರೊನಾ ವೈರಸ್ ಭೀತಿ ಎದುರಾಗದಿರಲಿ ಎಂದು ಸ್ಯಾನಿಟೈಸರ್ ಸಿಂಪಡಣೆ ಮಾಡಿ ಶುಚಿಗೊಳಿಸಲಾಯಿತು.