ವಿಜಯಪುರ: ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ಬಂದ ಸ್ಕಾರ್ಪಿಯೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಹಲವರು ಗಾಯಗೊಂಡ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದ ಹಳ್ಳದ ಗೆಣ್ಣೂರ ಕ್ರಾಸ್ ಬಳಿ ನಡೆದಿದೆ.
ಗೆಣ್ಣೂರ ಕ್ರಾಸ್ ಬಳಿ ವೇಗವಾಗಿ ಬಂದ ಸ್ಕಾರ್ಪಿಯೋ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್‌ಗೆ ಡಿಕ್ಕಿಯಾಗಿದೆ. ಗಾಯಗೊಂಡವರನ್ನ ಚಿಕಿತ್ಸೆಗಾಗಿ ಕೊಲ್ಹಾರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಾನೆ ಮಾಡಲಾಗಿದ್ದು, ಸ್ಥಳಕ್ಕೆ ಕೊಲ್ಹಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.