ವಿಜಯಪುರ: ಜಿಲ್ಲೆಯಲ್ಲಿಲ್ಲಿ ಹಿಜಾಬ್ ವಿವಾದ ಹಿನ್ನೆಲೆ ನಿಷೇಧಾಜ್ಞೆಯನ್ನು ವಿಸ್ತರಿಸಿ ಜಿಲ್ಲಾಧಿಕಾರಿ ಪಿ, ಸುನೀಲ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಫೆಬ್ರವರಿ 19 ವರೆಗೆ ಇದ್ದ ನಿಷೇಧಾಜ್ಞೆಯನ್ನು ನಾಳೆಯಿಂದ ಫೆ. 26 ರವರೆಗೆ ವಿಸ್ತರಣೆ ಮಾಡಲಾಗಿದೆ. ಶಾಲಾ ಕಾಲೇಜು ಆವರಣದ ಸುತ್ತ ಸೆಕ್ಷನ್ 144 ಅನ್ನು ಜಾರಿ ಮಾಡಲಾಗಿದೆ.
ಜಿಲ್ಲೆಯ ಎಲ್ಲಾ ಶಾಲಾ ಕಾಲೇಜು ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ವಿದ್ಯಾರ್ಥಿಗಳು, ಶಿಕ್ಷಕರು, ಸಿಬ್ಬಂದಿ, ಪೊಲೀಸರು ಹೊರತುಪಡಿಸಿ ಉಳಿದವರಿಗೆ ಶಾಲಾ ಕಾಲೇಜು ಪ್ರವೇಶಕ್ಕೆ ನಿಷೇಧ ಹೇರಲಾಗಿದೆ.