ವಿಜಯಪುರ :ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಪಿಡಿಒ ಸೇರಿ ಇಬ್ಬರು ಸಾವನ್ನಪ್ಪಿರುವ ಘಟನೆ ನಗರದಲ್ಲಿ ನಡೆದಿದೆ.
ವಿಜಯಪುರ.. ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಪಿಡಿಒ ಸೇರಿ ಇಬ್ಬರು ದುರ್ಮರಣ.. - two death
ಮೃತ ವ್ಯಕ್ತಿ ಗಣೇಶ ನಗರ ನಿವಾಸಿಯಾಗಿದ್ದು, ವಿಜಯಪುರ ತಾಲೂಕಿನ ಗ್ರಾಮ ಪಂಚಾಯತ್‌ವೊಂದಲ್ಲಿ ಪಿಡಿಒ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಈ ಬಗ್ಗೆ ನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
![ವಿಜಯಪುರ.. ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಪಿಡಿಒ ಸೇರಿ ಇಬ್ಬರು ದುರ್ಮರಣ.. road accident](https://etvbharatimages.akamaized.net/etvbharat/prod-images/768-512-7093599-thumbnail-3x2-chaii.jpg)
ನಿನ್ನೆ ತಡ ರಾತ್ರಿ ನಗರದ ಹೊರವಲಯದ ರೇಡಿಯೋ ಕೇಂದ್ರದ ಬಳಿ ಲಾರಿ ಹಾಗೂ ಬೈಕ್ ಡಿಕ್ಕಿಯಾಗಿ ಬೈಕ್ನಲ್ಲಿದ್ದ ಪಿಡಿಒ ಮಹೇಂದ್ರಕುಮಾರ ಕೆಂಗಲಗುತ್ತಿ (38) ಎಂಬುವರು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತ ವ್ಯಕ್ತಿ ಗಣೇಶ ನಗರ ನಿವಾಸಿಯಾಗಿದ್ದು, ವಿಜಯಪುರ ತಾಲೂಕಿನ ಗ್ರಾಮ ಪಂಚಾಯತ್‌ವೊಂದಲ್ಲಿ ಪಿಡಿಒ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಈ ಬಗ್ಗೆ ನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನೊಂದು ಪ್ರಕರಣದಲ್ಲಿ ಬೆಳಗ್ಗೆ ವಾಯುವಿಹಾರಕ್ಕೆ ತೆರಳಿದ್ದ ಮಹಿಳೆಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಆಕೆ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲಾಸ್ಪತ್ರೆ ಬಳಿ ನಡೆದಿದೆ. ಶಿವಲೀಲಾ ಮಲ್ಲಿಕಾರ್ಜುನ ಬಿಜಾಪುರ(50) ಸಾವಿಗೀಡಾದ ಮಹಿಳೆಯಾಗಿದ್ದಾಳೆ. ನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.