ವಿಜಯಪುರ: ಮಾಜಿ ಸಚಿವ ಎಂ.ಸಿ.ಮನಗೂಳಿ ನಿಧನ ನಂತರ ತೆರವಾಗಿರುವ ಸಿಂದಗಿ ವಿಧಾನಸಭೆ ಉಪಚುನಾವಣೆಗೆ ಬಿಜೆಪಿ ಸಿದ್ಧವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಿ. ಮನಗೂಳಿಯವರ ಪುತ್ರರನ್ನು ಪಕ್ಷಕ್ಕೆ ಸೆಳೆಯುವ ಕೆಲಸ ಬಿಜೆಪಿ ಮಾಡಿಲ್ಲ ಎಂದು ಸ್ಪಷ್ಟಪಡಿಸುವ ಮೂಲಕ ಸ್ಥಳೀಯ ಮುಖಂಡರಿಗೆ ಆದ್ಯತೆ ನೀಡುವ ಸುಳಿವು ನೀಡಿದರು.
ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಓದಿ:ಷಡಕ್ಷರಿಯವರಂತಹ ಶಕುನಿ ಇನ್ಯಾರಿಲ್ಲ: ವೇದಿಕೆಯಲ್ಲೇ ಕಾಲೆಳೆದ ಈಶ್ವರಪ್ಪ
ಸಿಂದಗಿ ಉಪಚುನಾವಣೆಗೆ ಆಕಾಂಕ್ಷಿಗಳ ಪಟ್ಟಿ ದೊಡ್ಡದಿದೆ. ಜಿಲ್ಲೆಯ ಪಕ್ಷದ ಮುಖಂಡರು ಹಾಗೂ ಹೈ ಕಮಾಂಡ್ ಜತೆ ಮಾತನಾಡಿ ಗೆಲ್ಲುವ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗುವುದು ಎಂದರು.
ಈಗಾಗಲೇ ಆಕಾಂಕ್ಷಿಗಳ ಪಟ್ಟಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹಾಗೂ ಸಿಎಂ ಯಡಿಯೂರಪ್ಪ ಅವರಿಗೆ ತಲುಪಿದೆ. ಗೆಲ್ಲುವ ಅಭ್ಯರ್ಥಿಯನ್ನು ಹುಡುಕಿ ಅವರಿಗೆ ಟಿಕೆಟ್ ನೀಡಲಾಗುವುದು ಎಂದು ತಿಳಿಸಿದರು.