ವಿಜಯಪುರ: ಮೈತ್ರಿ ಸರ್ಕಾರ ಯಾವುದೇ ಕಾರಣಕ್ಕೂ ಉರುಳುವುದಿಲ್ಲ ಎಂದು ಆರೋಗ್ಯ ಸಚಿವ ಶಿವಾನಂದ ಪಾಟೀಲ್ ವಿಶ್ವಾಸ ವ್ಯಕ್ತಪಡಿಸಿದರು.
ಮೈತ್ರಿ ಮುರಿಯುವುದು ಅಸಾಧ್ಯ: ಶಿವಾನಂದ ಪಾಟೀಲ್ ಅಚಲ ವಿಶ್ವಾಸ - Vijayapura
ವಿಜಯಪುರದಲ್ಲಿ ರಾಜ್ಯ ರಾಜಕಾರಣದ ಬೆಳವಣಿಗೆ ವಿಚಾರವಾಗಿ ಮಾತನಾಡಿರುವ ಆರೋಗ್ಯ ಸಚಿವ ಶಿವಾನಂದ ಪಾಟೀಲ್, ಮೈತ್ರಿ ಸರ್ಕಾರ ಯಾವುದೇ ಕಾರಣಕ್ಕೂ ಉರುಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಬಸವನಬಾಗೇವಾಡಿಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಪ್ರಚಾರದ ವೇಳೆ ಮಾತನಾಡಿದ ಅವರು, ಐದು ವರ್ಷಗಳ ಕಾಲ ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ಧಕ್ಕೆ ಆಗಲ್ಲ. ಮಾಜಿ ಸಚಿವ ರಮೇಶ ಜಾರಕಿಹೊಳಿ ನಡೆ ವಿಚಾರವಾಗಿ ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಈ ಬಗ್ಗೆ ಯಾರೂ ಆತಂಕ ಪಡುವ ಅವಶ್ಯಕತೆ ಇಲ್ಲ ಎಂದರು.
ಸರ್ಕಾರದಲ್ಲಿ ವರ್ಗಾವಣೆ ಹೇಗೋ ಖಾತೆ ಬದಲಾವಣೆಯೂ ಹಾಗೆ. ಖಾತೆ ಬದಲಾವಣೆ ಒಂದು ನಿರಂತರ ಪ್ರಕ್ರಿಯೆ. ಹೊಸಬರನ್ನು ಸೇರಿಸುವುದು, ಹಳಬರನ್ನು ತೆಗೆಯುವುದು ನಡೆಯುತ್ತಿರುತ್ತೆ ಎಂದು ಕೆಲ ಸಚಿವರ ಖಾತೆ ಬದಲಾವಣೆ ಹಾಗೂ ಮಂತ್ರಿಗಿರಿ ಕಳೆದುಕೊಳ್ಳುವ ಬಗ್ಗೆ ಪರೋಕ್ಷವಾಗಿ ಸುಳಿವು ಬಿಟ್ಟುಕೊಟ್ಟರು.