ಕರ್ನಾಟಕ

karnataka

ETV Bharat / state

ಹೊತ್ತಿ ಉರಿದ ಇಲೆಕ್ಟ್ರಿಕಲ್​ ಶಾಪ್​: 10 ಲಕ್ಷ ಮೌಲ್ಯದ ವಸ್ತುಗಳು ಬೆಂಕಿಗಾಹುತಿ

ವಿಜಯಪುರದಲ್ಲಿ ಶಾರ್ಟ್ ಸರ್ಕ್ಯೂಟ್​ನಿಂದಾಗಿ ಇಲೆಕ್ಟ್ರಿಕಲ್ ಹಾಗೂ ಹಾರ್ಡ್​ವೇರ್ ಅಂಗಡಿಯೊಂದು ಬೆಂಕಿಗಾಹುತಿಯಾಗಿದ್ದು, 10 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ನಾಶವಾಗಿವೆ.

Fire accident in vijaypur
ಧಗಧಗ ಹೊತ್ತಿ ಉರಿದ ಇಲೆಕ್ಟ್ರಿಕಲ್ ಶಾಪ್​

By

Published : Jan 25, 2020, 2:49 PM IST

ವಿಜಯಪುರ:ಶಾರ್ಟ್ ಸರ್ಕ್ಯೂಟ್​ನಿಂದಾಗಿ ಇಲೆಕ್ಟ್ರಿಕಲ್ ಹಾಗೂ ಹಾರ್ಡ್​ವೇರ್ ಅಂಗಡಿಯೊಂದು ಬೆಂಕಿಗಾಹುತಿಯಾಗಿರುವ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಗೊಳಸಂಗಿ ಗ್ರಾಮದಲ್ಲಿ ನಡೆದಿದೆ.

ಹೊತ್ತಿ ಉರಿದ ಇಲೆಕ್ಟ್ರಿಕಲ್ ಶಾಪ್​

ಗ್ರಾಮದ ಚಿದಾನಂದ ಹೊನ್ನಳ್ಳಿ ಎಂಬುವವರಿಗೆ ಸೇರಿದ ಅಂಗಡಿ ಇದಾಗಿದ್ದು, ತಡರಾತ್ರಿ ಹೊತ್ತಿದ ಬೆಂಕಿಗೆ ಅಂಗಡಿ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಅಂಗಡಿಯಲ್ಲಿದ್ದ ಇಲೆಕ್ಟ್ರಿಕಲ್ ವೈರ್, ಪೈಪ್​​ಗಳು, ಮನೆ ಕಟ್ಟಡದ ಸಾಮಗ್ರಿ‌ ಸೇರಿ ಮತ್ತಿತರೆ ಉಪಕರಣಗಳು ನಾಶವಾಗಿದ್ದು, 10 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಹಾನಿಯಾಗಿವೆ.

ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ‌ ದಳದ ಸಿಬ್ಬಂದಿ ದೌಡಾಯಿಸಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಈ ಸಂಬಂಧ ಕೂಡಗಿಯ ಎನ್​ಟಿಪಿಸಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details