ವಿಜಯಪುರ: ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಸ್ಥಾನದ ಹುಚ್ಚು ಹಿಡಿದ್ದಿದ್ದು, ಹುಚ್ಚುಚ್ಚಾಗಿ ಮಾತನಾಡಿದರೆ ನಾಳೆ ಯಾರು ಸಿದ್ದರಾಮಯ್ಯನ ಬಗ್ಗೆ ಟೀಕೆ ಮಾಡಲು ಹೋಗುವುದಿಲ್ಲ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಗುಡುಗಿದ್ದಾರೆ.
ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇದೇ ರೀತಿ ಹುಚ್ಚುಚ್ಚಾಗಿ ಮಾತನಾಡಿದರೆ ನಾಳೆ ಯಾರು ಸಿದ್ದರಾಮಯ್ಯನ ಬಗ್ಗೆ ಟೀಕೆ ಮಾಡಲು ಹೋಗುವುದಿಲ್ಲ. ನಾನೇ ಮುಖ್ಯಮಂತ್ರಿ ಎಂದು ಪದೇ ಪದೇ ಅವರು ಹೇಳುತ್ತಿದ್ದು, ಇಂತವರನ್ನು ನಾನು ನನ್ನ ಜೀವನದಲ್ಲಿ ಕಂಡಿಲ್ಲ. ವಾಟಾಳ್ ನಾಗರಾಜ್ ಕೂಡ ಈ ರೀತಿ ಹೇಳಿಲ್ಲ. ನನ್ನದು ಒಂದು ಪಕ್ಷ ಇದೆ. ಅನೇಕ ಚುನಾವಣೆಯಲ್ಲಿ ಭಾಗವಹಿಸುತ್ತೇವೆ. ನನ್ನ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದು ಹೇಳಿದ್ದರೆ ವಿನಾ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂದು ವಾಟಾಳ್ ಹೇಳಿಲ್ಲ ಎಂದರು.
ಆದರೆ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ಹುಚ್ಚು ಹಿಡಿಸಿಕೊಂಡಿದ್ದು, ಹಗಲು ರಾತ್ರಿ ಆ ಸ್ಥಾನದ ಕನಸು ಕಾಣುತ್ತಿದ್ದಾರೆ. ಮುಖ್ಯಮಂತ್ರಿ ಸ್ಥಾನದ ಬಗ್ಗೆ ಹುಚ್ಚು ಹಿಡಿದಿರುವ ಇವರಿಗೆ ಸರಿಯಾದ ಟ್ರೀಟ್ಮೆಂಟ್ ಕೊಡಿಸಿ ಎಂದು ಕಾಂಗ್ರೆಸ್ ನಾಯಕರಿಗೆ ಒತ್ತಾಯ ಮಾಡುತ್ತೀನಿ ಎಂದರು.