ವಿಜಯಪುರ :ಶುದ್ದ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಲಾಕ್‌ಡೌನ್ ನಡುವೆಯೂ ಗ್ರಾಮಸ್ಥರು ಪಂಚಾಯತ್‌ಗೆ ಮುತ್ತಿಗೆ ಹಾಕಿರೋ ಘಟನೆ ಸಿಂದಗಿ ತಾಲೂಕಿನ ಬ್ರಹ್ಮದೇವನಮಡು ಗ್ರಾಮದಲ್ಲಿ ನಡೆದಿದೆ.
ಶುದ್ಧ ಕುಡಿಯುವ ನೀರಿಗಾಗಿ ಪಂಚಾಯತ್‌ಗೆ ಮುತ್ತಿಗೆ.. ಅಧಿಕಾರಿಗಳ ವಿರುದ್ಧ ಆಕ್ರೋಶ.. - ಬ್ರಹ್ಮದೇವನಮಡು ಗ್ರಾಮ
ಅಧಿಕಾರಿಗಳು ಸರಿಯಾಗಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿಲ್ಲ. ಇನ್ನೂ ಕುಡಿಯುವ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಈವರೆಗೂ ಗ್ರಾಮ ಪಂಚಾಯತ್ ಅಧಿಕಾರಿಗಳು ಮಾತ್ರ ನೀರು ಕಲ್ಪಿಸಲು ಮುಂದಾಗಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.
ಹೊನ್ನಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಬ್ರಹ್ಮದೇವನಮಡು ಗ್ರಾಮದಲ್ಲಿ ಕಳೆದ ಎರಡು ತಿಂಗಳಿಂದ ಬಿಸಿಲು ಹೆಚ್ಚಾಗಿದೆ. ಗ್ರಾಮದಲ್ಲಿ ಅಧಿಕಾರಿಗಳು ಸರಿಯಾಗಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿಲ್ಲ. ಇನ್ನೂ ಕುಡಿಯುವ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಈವರೆಗೂ ಗ್ರಾಮ ಪಂಚಾಯತ್ ಅಧಿಕಾರಿಗಳು ಮಾತ್ರ ನೀರು ಕಲ್ಪಿಸಲು ಮುಂದಾಗಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.
ಕಳೆದ ಹಲವು ದಿನಗಳಿಂದ ನೀರಿಗಾಗಿ ಜನ ಪರಿತಪಿಸುವಂತಾಗಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಅಧಿಕಾರಿಗಳು ತಕ್ಷಣವೇ ಜಿಲ್ಲಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಜೊತೆಗೆ ಮಾತನಾಡಿ ಸಮಸ್ಯೆಗೆ ಪರಿಹಾರ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.