ಕರ್ನಾಟಕ

karnataka

ETV Bharat / state

ಸಾಮಾಜಿಕ ಅಂತರ ಕಾಯ್ದುಕೊಂಡು ಪೊಲೀಸರಿಂದ ಸಾರ್ವಜನಿಕರ ದೂರುಗಳ ವಿಚಾರಣೆ - social distance maintain in police station

ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸಲು ಪೊಲೀಸ್ ಇಲಾಖೆ ಸಾಮಾಜಿಕ ಅಂತರ ಕಾಯ್ದುಕೊಂಡು ಪ್ರತ್ಯೇಕ ಸ್ಥಳ ನಿಗದಿಪಡಿಸಿ ವಿಚಾರಣೆ ನಡೆಸುತ್ತಿದೆ.

POLICE STATION
ಸಾಮಾಜಿಕ ಅಂತರದಲ್ಲಿ ವಿಚಾರಣೆ

By

Published : Jun 23, 2020, 4:44 PM IST

ಮುದ್ದೇಬಿಹಾಳ(ವಿಜಯಪುರ): ಪೊಲೀಸರಿಗೆ ಹಾಗೂ ಅಪರಾಧಿಗಳಿಗೂ ಕೊರೊನಾ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಪೊಲೀಸ್ ಠಾಣೆಗಳಲ್ಲಿ ಪೊಲೀಸರು ಸಾಮಾಜಿಕ ಅಂತರ ಕಾಯ್ದುಕೊಂಡು ಪ್ರತ್ಯೇಕ ಸ್ಥಳ ನಿಗದಿಪಡಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಸಾಮಾಜಿಕ ಅಂತರ ಕಾಯ್ದುಕೊಂಡು ಪ್ರಕರಣಗಳ ವಿಚಾರಣೆ

ಮುದ್ದೇಬಿಹಾಳ ಪೊಲೀಸ್ ವೃತ್ತದ ಸಿಪಿಐ ಆನಂದ ವಾಘಮೋಡೆ, ಪಿಎಸ್​ಐ ಮಲ್ಲಪ್ಪ ಮಡ್ಡಿ ಮೇಲಾಧಿಕಾರಿಗಳ ನಿರ್ದೇಶನದಂತೆ ಪ್ರತ್ಯೇಕ ಶಾಮಿಯಾನ ಹಾಕಿಸಿ ಠಾಣೆಗೆ ಬರುತ್ತಿರುವ ದೂರುಗಳ ವಿಚಾರಣೆ ಮಾಡುತ್ತಿದ್ದಾರೆ. ಜನರು ನೀಡುತ್ತಿರುವ ದೂರುಗಳಿಗೆ ಹೊರಗಡೆಯೇ ಮಾಹಿತಿ ಸಂಗ್ರಹಿಸಲಾಗುತ್ತಿದೆ.

ABOUT THE AUTHOR

...view details