ವಿಜಯಪುರ: ಎಲ್ಲವೂ ಸಮಾಜದಿಂದ ಬಂದಿದೆ. ಹಾಗಾಗಿ, ಕಾಲ ಕಾಲಕ್ಕೆ ಸಮಾಜವನ್ನು ಸ್ವಚ್ಛಗೊಳಿಸಬೇಕು. ಮಠ, ರಾಜಕೀಯ ಪಕ್ಷಗಳು ಬೇಧಭಾವ ಮಾಡಬಾರದು. ಸಂಬಂಧಗಳಲ್ಲಿ ದ್ರೋಹ ಬಗೆಯುವ ಕೆಲಸ ಆಗಬಾರದು. ದೇವ ಭಕ್ತಿ, ದೇಶ ಭಕ್ತಿ ಒಂದೇ. ನಾವು ಸರಿಯಾಗಿದ್ರೆ ಎಲ್ಲವೂ ಸರಿಯಾಗಿ ಇರುತ್ತದೆ ಎಂದು ಪೇಜಾವರ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು.
ಪಠ್ಯದಲ್ಲಿ ಲೈಂಗಿಕ ಶಿಕ್ಷಣ ವಿಚಾರ: ಲೈಂಗಿಕ ವಿಷಯವನ್ನು ಪಠ್ಯಪುಸ್ತಕದಲ್ಲಿ ಅಳವಡಿಸುವ ವಿಚಾರವಾಗಿ ಪ್ರತಿಕ್ರಿಯಿಸಿದ ಶ್ರೀಗಳು, ನಮ್ಮಲ್ಲಿ ಶಿಕ್ಷಣ ಹಾಗೂ ಮನೋತಜ್ಞರಿದ್ದಾರೆ. ಅವರು ಚರ್ಚಿಸಿ ಈ ಕುರಿತು ತೀರ್ಮಾನ ಮಾಡಬೇಕು. ಕೇವಲ ಒಬ್ಬೊಬ್ಬರೇ ತೀರ್ಮಾನ ಮಾಡಬಾರದು. ಇದರಿಂದ ಸಮಾಜದಲ್ಲಿ ಗೊಂದಲ ನಿರ್ಮಾಣ ಆಗುತ್ತದೆ ಎಂದು ಕಿವಿಮಾತು ಹೇಳಿದರು.
ಜ್ಞಾನ ಯೋಗಾಶ್ರಮಕ್ಕೆ ಪೇಜಾವರ ಶ್ರೀ ಭೇಟಿ:ನಡೆದಾಡುವ ದೇವರೆಂದೇ ಖ್ಯಾತಿ ಗಳಿಸಿದ್ದ ಸಿದ್ದೇಶ್ವರ ಸ್ವಾಮೀಜಿಗಳ ಜ್ಞಾನ ಯೋಗಾಶ್ರಮಕ್ಕೆ ಪೇಜಾವರ ಮಠದ ಶ್ರೀಗಳು ಭೇಟಿ ನೀಡಿದರು. ಬಳಿಕ ಬಸವಲಿಂಗ ಶ್ರೀ ಸೇರಿದಂತೆ ಇತರೆ ಸ್ವಾಮೀಜಿಗಳನ್ನು ಭೇಟಿ ಮಾಡಿ ಕೆಲಕಾಲ ಚರ್ಚಿಸಿದ್ದಾರೆ.
ಇದನ್ನೂ ಓದಿ:ರಾಮ ಸೇವಾ ಸಂಕಲ್ಪ ಅಭಿಯಾನ ಕೈಗೊಳ್ಳುವಂತೆ ಪ್ರಧಾನಿಗೆ ಪೇಜಾವರ ಶ್ರೀ ಸಲಹೆ
ಜೆಡಿಎಸ್ ಪಂಚರತ್ನ ರಥ ಯಾತ್ರೆ: ಜ. 22ರ ವರೆಗೆ ವಿಜಯಪುರ ಜಿಲ್ಲೆಯಲ್ಲಿ ಪಂಚರತ್ನ ಯಾತ್ರೆ ಸಾಗಲಿದೆ. ಮೊದಲ ದಿನವಾದ ಮಂಗಳವಾರ ಇಂಡಿ ತಾಲೂಕಿನ ಅಗರಖೇಡ ಗ್ರಾಮಕ್ಕೆ ಮಾಜಿ ಸಿ.ಎಂ.ಕುಮಾರಸ್ವಾಮಿ ಆಗಮಿಸುತ್ತಿದ್ದಂತೆ ಜೆಡಿಎಸ್ ನಾಯಕರು ಅದ್ಧೂರಿಯಾಗಿ ಬರ ಮಾಡಿಕೊಂಡರು. ಇಂದು ಸಿಂದಗಿಯಲ್ಲಿ ಯಾತ್ರೆ ಸಾಗಲಿದೆ.