ವಿಜಯಪುರ: ಮನೆಗಳ್ಳತನ ಮಾಡುತ್ತಿದ್ದ ಓರ್ವ ಅಪ್ರಾಪ್ತ ಸೇರಿ ಮೂವರನ್ನು ಇಲ್ಲಿನ ಜಲನಗರ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆರೋಪಿಗಳಿಂದ 12 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಕಳ್ಳತನಕ್ಕೆ ಬಳಸುತ್ತಿದ್ದ ಆಟೋ ಜಪ್ತಿ ಮಾಡಿದ್ದಾರೆ.
ಬಂಧಿತರನ್ನು ಗೋಬಿಮಂಚೂರಿ ಮಾರಾಟ ಮಾಡುತ್ತಿದ್ದ ಗಣೇಶ ನಗರ ನಿವಾಸಿ ಕಿರಣ ವಿಶಾಲ ಶರ್ಮಾ, ಆಟೋರಿಕ್ಷಾ ಚಾಲಕ ವೀರೇಶ ಶಿವಾನಂದ ಬಂಥನಾಳ ಹಾಗೂ ಇನ್ನೊಬ್ಬ ಅಪ್ರಾಪ್ತ ಬಾಲಕ ಎಂದು ಗುರುತಿಸಲಾಗಿದೆ. ಇವರು ಮನೆಯಲ್ಲಿ ಯಾರೂ ಇಲ್ಲದ ವೇಳೆ ಆಟೋದಲ್ಲಿ ಬಂದು ಮನೆಗಳ್ಳತನ ಮಾಡಿ ಪರಾರಿಯಾಗುತ್ತಿದ್ದರು ಎಂಬ ಮಾಹಿತಿ ದೊರೆತಿದೆ.