ವಿಜಯಪುರ: ಕೊರೊನಾ ಕಾರಣ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಐತಿಹಾಸಿಕ ಶ್ರೀ ಸಿದ್ದೇಶ್ವರ ಸಂಕ್ರಮಣ ಜಾತ್ರೆ ನಡೆಸದಿರಲು ಈ ಬಾರಿ ತೀರ್ಮಾನಿಸಲಾಗಿದೆ.
ಸೋಮವಾರ ದೇವಸ್ಥಾನದ ಸಭಾಭವನದಲ್ಲಿ ಸಿದ್ದೇಶ್ವರ ಸಂಸ್ಥೆ ಅಧ್ಯಕ್ಷ ಹಾಗೂ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಧ್ಯಕ್ಷತೆಯಲ್ಲಿ ಈ ಕುರಿತ ಸಭೆ ನಡೆಯಿತು. ಈ ವೇಳೆ ಕೋವಿಡ್ ಸೋಂಕು ಹೆಚ್ಚಾಗುವ ಸಾಧ್ಯತೆಗಳ ಬಗ್ಗೆ ಸರ್ಕಾರ ನೀಡಿರುವ ಸಲಹೆ ಪರಿಗಣಿಸಿ, ಜಾತ್ರೆ ರದ್ದುಗೊಳಿಸುವ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಭೆಯಲ್ಲಿ ಸಿದ್ದೇಶ್ವರ ಸಂಸ್ಥೆಯ ಅಧ್ಯಕ್ಷ ಬಸಯ್ಯ ಹಿರೇಮಠ ಘೋಷಿಸಿದ್ದಾರೆ.