ಕರ್ನಾಟಕ

karnataka

ನಾಳೆಯಿಂದ SSLC ಪರೀಕ್ಷೆ.. ಹಿಜಾಬ್ ಧರಿಸಿ ಬಂದ್ರೆ ನೋ ಎಂಟ್ರಿ

SSLC Exam-2022.. ನಾಳೆಯಿಂದ ರಾಜ್ಯಾದ್ಯಂತ ಎಸ್ ಎಸ್ ಎಲ್ ಸಿ ಪರೀಕ್ಷೆ ಪ್ರಾರಂಭವಾಗುತ್ತಿದ್ದು, ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಪೂರ್ವ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸರ್ಕಾರದ ಸುತ್ತೋಲೆಯಂತೆ ಪರೀಕ್ಷಾ ಕೇಂದ್ರದಲ್ಲಿ ಹಿಜಾಬ್ ಗೆ ಅವಕಾಶವಿಲ್ಲ ಎಂದು ತಿಳಿದುಬಂದಿದೆ.

By

Published : Mar 27, 2022, 3:21 PM IST

Published : Mar 27, 2022, 3:21 PM IST

from-tommorrow-onwards-sslc-exams-hijab-was-banned-in-the-exam-centres
ನಾಳೆಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ, ಹಿಜಾಬ್ ಗೆ ಅವಕಾಶವಿಲ್ಲ

ವಿಜಯಪುರ: ರಾಜ್ಯಾದ್ಯಂತ ನಾಳೆಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲಾ ಪರೀಕ್ಷಾ ಕೇಂದ್ರದಲ್ಲಿ ಪೂರ್ವ ಸಿದ್ಧತೆ ಮಾಡಿಕೊಳ್ಳಲಾಗಿದೆ.‌ ವಿಜಯಪುರ ಜಿಲ್ಲೆಯ ಒಟ್ಟು 147 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಒಟ್ಟು ಏಳು ಶೈಕ್ಷಣಿಕ ವಲಯಗಳಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಜರುಗಲಿದೆ.‌

ವಿಜಯಪುರದ 24, ವಿಜಯಪುರ ಗ್ರಾಮೀಣದ 23, ಬಸವನಬಾಗೇವಾಡಿಯ 24, ಚಡಚಣದ 13, ಇಂಡಿಯ 18, ಮುದ್ದೇಬಿಹಾಳದ 20 ,ಸಿಂದಗಿಯ 26 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿದೆ. ಜಿಲ್ಲೆಯಲ್ಲಿ ಪರೀಕ್ಷೆಗೆ ಒಟ್ಟು 38,790 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ. ಇದರಲ್ಲಿ ಬಾಲಕರು 20,932, ಬಾಲಕಿಯರು 17,858 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಸಕಲ ವ್ಯವಸ್ಥೆ ಮಾಡಲಾಗಿದೆ ಎಂದು ಡಿಡಿಪಿಐ ಎನ್ ವಿ ಹೊಸೂರ್ ತಿಳಿಸಿದ್ದಾರೆ.

ನಾಳೆಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ, ಹಿಜಾಬ್ ಗೆ ಅವಕಾಶವಿಲ್ಲ

ಹಿಜಾಬ್ ಗೆ ಇಲ್ಲ ಅವಕಾಶ: ಸರ್ಕಾರಿ ನಿಯಮದಂತೆ ಪರೀಕ್ಷಾ ಕೇಂದ್ರಗಳಲ್ಲಿ ಹಿಜಾಬ್ ಗೆ ಅವಕಾಶ ನೀಡಲಾಗಿಲ್ಲ. ‌ಸರ್ಕಾರದ ಸುತ್ತೋಲೆಯ ಪ್ರಕಾರ ಹಿಜಾಬ್ ಗೆ ಪರೀಕ್ಷಾ ಕೇಂದ್ರದಲ್ಲಿ ಅವಕಾಶ ಇಲ್ಲ, ಸರ್ಕಾರಿ ಹಾಗೂ ಆಯಾ ಶಾಲೆಗಳ ಸಮವಸ್ತ್ರದಲ್ಲೇ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಬೇಕೆಂದು ಡಿಡಿಪಿಐ ಎನ್ ವಿ ಹೊಸೂರ್ ಮಾಹಿತಿ ನೀಡಿದ್ದಾರೆ. ಪರೀಕ್ಷಾ ಕೇಂದ್ರದ 200ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಕೋವಿಡ್-19 ರ ಹಿನ್ನೆಲೆಯಲ್ಲಿ ಈ ಪರೀಕ್ಷೆಯನ್ನು ಪ್ರಮಾಣಿತ ಕಾರ್ಯಾಚರಣಾ ವಿಧಾನ (ಎಸ್ ಒ ಪಿ) ದನ್ವಯ ನಡೆಯುವಂತೆ ನೋಡಿಕೊಳ್ಳಬೇಕು. ಮಕ್ಕಳಿಗೆ ಮಾಸ್ಕ್ ಇರುವಂತೆ ನೋಡಿ ಕೊಳ್ಳಬೇಕು. ನಕಲು ತಡೆಯಲು ಅನ್ಯ ವ್ಯಕ್ತಿಗಳಿಗೆ ಅವಕಾಶ ನೀಡದಂತೆ ಕಡ್ಡಾಯವಾಗಿ ಮಕ್ಕಳ ಹಾಲ್ ಟಿಕೆಟ್, ಐಡಿ, ರೋಲ್ ನಂಬರ್ ತಪಾಸಣೆ ಮಾಡಿ ಪರೀಕ್ಷೆಗೆ ಅರ್ಹ ವಿದ್ಯಾರ್ಥಿಗೆ ಅವಕಾಶ ನೀಡಬೇಕು. ಅದರಂತೆ ಥರ್ಮಲ್ ಸ್ಕ್ಯಾನರ್, ಸ್ಯಾನಿಟೈಜರ್ ವ್ಯವಸ್ಥೆ, ಕೋವಿಡ್ ಲಕ್ಷಣವುಳ್ಳವರು ಹಾಗೂ ಕೋವಿಡ್ ದೃಢಪಡುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯೊಂದನ್ನು ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಕಾಯ್ದಿರಿಸಲು ಸೂಚಿಸಲಾಗಿದೆ. ಪ್ರತ್ಯೇಕ ಆರೋಗ್ಯ ತಪಾಸಣಾ ಕೌಂಟರ್ ಸಹ ಸ್ಥಾಪಿಸಲು ಕ್ರಮಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿದುಬಂದಿದೆ.

ಓದಿ :ವಾಯು ರಕ್ಷಣಾ ವ್ಯವಸ್ಥೆಯ ಕ್ಷಿಪಣಿಯ ಪರೀಕ್ಷಿಸಿದ ಭಾರತ

For All Latest Updates

ABOUT THE AUTHOR

...view details