ಕರ್ನಾಟಕ

karnataka

ETV Bharat / state

ಮೇ ಎರಡನೇ ವಾರದಲ್ಲಿ ಎಸ್​ಎಸ್ಎಲ್​ಸಿ ಫಲಿತಾಂಶ ಪ್ರಕಟ: ಶಿಕ್ಷಣ ಸಚಿವ ನಾಗೇಶ್

ಏ.12ರಿಂದ ಕೀ ಉತ್ತರಗಳು, ಉತ್ತರಗಳಿಗೆ ಆಕ್ಷೇಪಣೆ ಕರೆಯುವುದು ಸೇರಿದಂತೆ ಇನ್ನಿತರ ಪ್ರಕ್ರಿಯೆಗಳು ಆರಂಭವಾಗುತ್ತವೆ. ಏಪ್ರಿಲ್ ಕೊನೆಯ ವಾರದಲ್ಲಿ ಮೌಲ್ಯಮಾಪನ ಪ್ರಕ್ರಿಯೆ ಆರಂಭವಾಗುತ್ತದೆ. ಮೇ ಎರಡನೇ ವಾರದಲ್ಲಿ ಫಲಿತಾಂಶ ಪ್ರಕಟಿಸಲಾಗುವುದು. ಜೂನ್ 4ನೇ ವಾರದಲ್ಲಿ ಪೂರಕ ಪರೀಕ್ಷೆ ನಡೆಯಲಿದೆ ಎಂದು ಸಚಿವ ನಾಗೇಶ್ ಮಾಹಿತಿ ನೀಡಿದರು.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್

By

Published : Apr 11, 2022, 7:26 PM IST

Updated : Apr 11, 2022, 8:06 PM IST

ವಿಜಯಪುರ: ರಾಜ್ಯದಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸುಸೂತ್ರವಾಗಿ ನಡೆದು ಮುಕ್ತಾಯವಾಗಿದೆ. ಮೇ ಎರಡನೇ ವಾರದಲ್ಲಿ ಫಲಿತಾಂಶ ಪ್ರಕಟಿಸುವ ಗುರಿ ಹೊಂದಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು. ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳ ಶೈಕ್ಷಣಿಕ ಪ್ರಗತಿ ಪರಿಶೀಲನೆಗಾಗಿ ವಿಜಯಪುರ ಜಿಲ್ಲೆಗೆ ಆಗಮಿಸಿರುವ ಸಚಿವ ನಾಗೇಶ್, ಆಲಮಟ್ಟಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಮಾ.28ರಿಂದ ಆರಂಭವಾದ ಪರೀಕ್ಷೆ ಸುಸೂತ್ರವಾಗಿ ನಡೆದಿದೆ. ಒಂದು ಪರೀಕ್ಷಾ ಕೇಂದ್ರದಲ್ಲಿ ಮಾತ್ರ ಪರೀಕ್ಷಾ ಅಕ್ರಮ ವರದಿಯಾಗಿದೆ. ಈ ಸಂಬಂಧ ಒಬ್ಬ ವಿದ್ಯಾರ್ಥಿಯನ್ನು ಡಿಬಾರ್ ಮಾಡಲಾಗಿದೆ. ಮೊದಲ ಬಾರಿ ಪರೀಕ್ಷೆ ಬರೆಯುತ್ತಿರುವವರಲ್ಲಿ ಹಾಜರಾತಿ ಪ್ರಮಾಣ ಶೇ.98ಕ್ಕಿಂತ ಹೆಚ್ಚು ಇದೆ. ಆದರೆ, ಖಾಸಗಿ ಅಭ್ಯರ್ಥಿಗಳು ಮತ್ತು ಪುನರಾವರ್ತಿತ ಅಭ್ಯರ್ಥಿಗಳ ಸಂಖ್ಯೆಯಲ್ಲಿ ಗೈರು ಹಾಜರಾತಿ ಪ್ರಮಾಣ ಎಂದಿನಂತೆ ಮುಂದುವರೆದಿದೆ.

ಮೇ ಎರಡನೇ ವಾರದಲ್ಲಿ ಎಸ್​ಎಸ್ಎಲ್​ಸಿ ಫಲಿತಾಂಶ ಪ್ರಕಟ: ಶಿಕ್ಷಣ ಸಚಿವ ನಾಗೇಶ್

ಏ.12ರಿಂದ ಕೀ ಉತ್ತರಗಳು, ಉತ್ತರಗಳಿಗೆ ಆಕ್ಷೇಪಣೆ ಕರೆಯುವುದು ಸೇರಿದಂತೆ ಇನ್ನಿತರ ಪ್ರಕ್ರಿಯೆಗಳು ಆರಂಭವಾಗುತ್ತವೆ. ಏಪ್ರಿಲ್ ಕೊನೆಯ ವಾರದಲ್ಲಿ ಮೌಲ್ಯಮಾಪನ ಪ್ರಕ್ರಿಯೆ ಆರಂಭವಾಗುತ್ತದೆ. ಮೇ ಎರಡನೇ ವಾರದಲ್ಲಿ ಫಲಿತಾಂಶ ಪ್ರಕಟಿಸಲಾಗುವುದು. ಜೂನ್ 4ನೇ ವಾರದಲ್ಲಿ ಪೂರಕ ಪರೀಕ್ಷೆ ನಡೆಯಲಿದೆ ಎಂದು ಸಚಿವರು ಮಾಹಿತಿ ನೀಡಿದರು.

ಸಮವಸ್ತ್ರ ವಿಚಾರವಾಗಿ ಶಾಲೆಗಳಲ್ಲಿ ಯಾವುದೇ ಗೊಂದಲ ಉಂಟಾಗಿಲ್ಲ. ವಿದ್ಯಾರ್ಥಿಗಳು ಸಮವಸ್ತ್ರದಲ್ಲಿ ಹಾಜರಾಗಿ ಪರೀಕ್ಷೆ ಬರೆದಿದ್ದಾರೆ. ಅನಾರೋಗ್ಯ ಲಕ್ಷಣಗಳು ಕಂಡು ಬಂದರೆ ಅಂತಹ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಪರೀಕ್ಷೆ ಬರೆಯಲು ಕೊಠಡಿ ವ್ಯವಸ್ಥೆ ಕಲ್ಪಿಸಲಾಗಿತ್ತು. ಪರೀಕ್ಷೆಯ ಅವಧಿಯಲ್ಲಿ ಯಾವೊಬ್ಬ ವಿದ್ಯಾರ್ಥಿಗೂ ಕೋವಿಡ್ ಪಾಸಿಟಿವ್ ಬಂದಿಲ್ಲ ಎಂದು ಹೇಳಿದರು.

ಇದನ್ನೂ ಓದಿ:ಒಮಿಕ್ರಾನ್ ನಂತರ ಇದೀಗ XE, ME ರೂಪಾಂತರಿ ಭೀತಿ ; ತುರ್ತು ಸಭೆ ನಡೆಸಿದ ತಾಂತ್ರಿಕ ಸಲಹಾ ಸಮಿತಿ..

Last Updated : Apr 11, 2022, 8:06 PM IST

ABOUT THE AUTHOR

...view details