ವಿಜಯಪುರ: ವಶಕ್ಕೆ ಪಡೆದ ಪಿಎಫ್ಐ ಜಿಲ್ಲಾಧ್ಯಕ್ಷ ಅಸ್ಪಾಕ ಜಮಖಂಡಿಯನ್ನು ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, 10ದಿನ ನ್ಯಾಯಾಂಗ ಬಂಧನಕ್ಕೆ ನ್ಯಾಯಾಧೀಶರು ಒಳಪಡಿಸಿ ಆದೇಶಿಸಿದ್ದಾರೆ ಎಂದು ಜಿಲ್ಲಾ ಎಸ್ಪಿ ಆನಂದಕುಮಾರ ತಿಳಿಸಿದ್ದಾರೆ.
ಈಟಿವಿ ಭಾರತದೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಅವರು, ಯಾವುದಾದರೂ ಕೃತ್ಯ ಎಸಗಬಹುದೆಂದು ಮುನ್ನೆಚ್ಚರಿಕೆಯಾಗಿ ಅಸ್ಪಾಕ ಜಮಖಂಡಿಯನ್ನು ಇಂದು ಬೆಳಗ್ಗೆ ಅವರ ಮನೆ ಮೇಲೆ ದಾಳಿ ನಡೆಸಿ ವಶಕ್ಕೆ ಪಡೆದು ವಿಚಾರಣೆ ಕೈಗೊಳ್ಳಲಾಗಿದೆ. ಈಗ ನ್ಯಾಯಾಲಯ ಅವರಿಗೆ 10 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಬಂಧಿತ ಮುಖಂಡನ ಬಳಿ ಯಾವುದೇ ವಸ್ತುಗಳನ್ನು ವಶಪಡಿಸಿಕೊಂಡಿಲ್ಲ ಎಂದು ಎಸ್ಪಿ ಸ್ಪಷ್ಟಪಡಿಸಿದ್ದಾರೆ.
ದೇಶದಲ್ಲಿ ಪಿಎಫ್ಐ ಸಂಘಟನೆ ಕಾರ್ಯಕರ್ತರ ಬಂಧನ ವಿಚಾರವಾಗಿ ವಿಜಯಪುರ ನಗರದಲ್ಲಿಯೋ ಎನ್ಐಎ ಅಧಿಕಾರಿಗಳ ನಿರ್ದೇಶನದಂತೆ ಜಿಲ್ಲಾ ಪೊಲೀಸರು ದಾಳಿ ನಡೆಸಿದ್ದು, ಪಿಎಫ್ಐ ಮುಖ್ಯಸ್ಥರನ್ನು ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ.