ವಿಜಯಪುರ: ವಿದ್ಯಾರ್ಥಿನಿಯೋರ್ವಳು ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯ ಅಕ್ಕ ಮಹಾದೇವಿ ಮಹಿಳಾ ವಿವಿಯ ಹಾಸ್ಟೆಲ್ನಲ್ಲಿ ನಡೆದಿದೆ.
ವಿಜಯಪುರ: ನಾಳೆ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿನಿ ಇಂದು ನೇಣಿಗೆ ಶರಣು! - ವಿಜಯಪುರದಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ
ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯಪುರದ ಅಕ್ಕ ಮಹಾದೇವಿ ವಿವಿಯ ವಸತಿ ನಿಲಯದಲ್ಲಿ ನಡೆದಿದೆ.
ಸ್ನಾತಕೋತ್ತರ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿದ್ದ ಕಲಬುರಗಿ ಮೂಲದ ಐಶ್ವರ್ಯ (23) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ. ನಾಳೆ ನಡೆಯಲಿರುವ ಎಂಕಾಂ ಪದವಿಯ ಪರೀಕ್ಷೆ ಬರೆಯುವ ಸಲುವಾಗಿ ವಸತಿ ನಿಲಯದಲ್ಲಿ ಐಶ್ವರ್ಯ ಉಳಿದುಕೊಂಡಿದ್ದಳು. ಇಂದು ಬೆಳಗ್ಗೆ 11ಗಂಟೆ ಸುಮಾರಿಗೆ ಕೊಠಡಿಯಲ್ಲಿ ನೇಣು ಹಾಕಿಕೊಂಡಿದ್ದಾಳೆ.
ಇತ್ತೀಚೆಗಷ್ಟೇ ಐಶ್ವರ್ಯಾಳ ನಿಶ್ಚಿತಾರ್ಥ ಕೂಡ ನಡೆದಿತ್ತು ಎನ್ನಲಾಗ್ತಿದೆ. ವಿದ್ಯಾರ್ಥಿನಿಯ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಹಂಗಾಮಿ ಕುಲಪತಿ ಪ್ರೊ. ಓಂಕಾರ ಕಾಕಡೆ ಸೇರಿದಂತೆ ವಿವಿಯ ಆಡಳಿತ ಮಂಡಳಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿದ್ಯಾರ್ಥಿನಿಯ ಪಾಲಕರಿಗೆ ಮಾಹಿತಿ ನೀಡಲಾಗಿದೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.