ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ತಾರಕಕ್ಕೇರಿದೆ. ನಗರದ ಸರ್ಕಾರಿ ಪದವಿಪೂರ್ವ ಮತ್ತು ಪದವಿ ಮಹಾವಿದ್ಯಾಲಯದಲ್ಲಿ ಬೆಳಗ್ಗೆ ವಿದ್ಯಾರ್ಥಿನಿಯರು ಹಿಜಾಬ್, ಬುರ್ಖಾ ಧರಿಸಿ ಬಂದಿದ್ದು ಗೊಂದಲ ಸೃಷ್ಟಿಸಿತು.
ನ್ಯಾಯಾಲಯದ ಅಂತಿಮ ತೀರ್ಪು ಬರುವವರೆಗೂ ಸಮವಸ್ತ್ರ ನೀತಿ ಪಾಲನೆ ಕಡ್ಡಾಯ. ಆದ್ರೆ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಯೇ ತರಗತಿಗಳಿಗೆ ಹಾಜರಾದರು. ಸರ್ಕಾರದ ಸಮವಸ್ತ್ರ ನೀತಿ ಸಂಹಿತೆ ಪಾಲಿಸಬೇಕೆಂದು ಕಾಲೇಜಿನ ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ವಿದ್ಯಾರ್ಥಿನಿಯರು ತರಗತಿಯೊಳಗೆ ಹಿಜಾಬ್ ತೆಗೆದು ಹಾಜರಾಗಬೇಕೆಂದು ಸೂಚನೆ ನೀಡಿದರೂ ಸಹ ಕೇಳದ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಯೇ ತರಗತಿಗಳಲ್ಲಿ ಕುಳಿತರು.