ವಿಜಯಪುರ: ರಾಜ್ಯ ಸರ್ಕಾರ ಹಿಂದುಳಿದ ಕಲ್ಯಾಣ ಇಲಾಖೆಯ 2019-20ನೇ ಸಾಲಿನ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಮಂಜೂರಾತಿಗೆ ಹೊಸ ವಿದ್ಯಾರ್ಥಿಗಳನ್ನು ಪರಿಗಣಿಸುವುದಿಲ್ಲ ಎಂದು ಆದೇಶ ಹೊರಡಿಸಿದೆ. ಇದನ್ನು ಖಂಡಿಸಿ ಎಐಡಿಎಸ್‌ಓ ವಿದ್ಯಾರ್ಥಿ ಸಂಘಟನೆ ವಿಜಯಪುರದಲ್ಲಿ ಪ್ರತಿಭಟನೆ ನಡೆಸಿತು.
ಸರ್ಕಾರದ ಆದೇಶ ಖಂಡಿಸಿ ವಿಜಯಪುರದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ - ವಿಜಯಪುರದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ
2019-20ನೇ ಸಾಲಿನ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಮಂಜೂರಾತಿಗೆ ಹೊಸ ವಿದ್ಯಾರ್ಥಿಗಳನ್ನು ಪರಿಗಣಿಸುವುದಿಲ್ಲ ಎಂದು ಸರ್ಕಾರದ ಆದೇಶ ಹೊರಡಿಸಿದೆ. ಇದನ್ನು ಖಂಡಿಸಿ ವಿಜಯಪುರದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ರು.
ವಿಜಯಪುರದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ
ನಗರದ ಗಾಂಧಿ ವೃತದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ರು. ಸರ್ಕಾರದ ಆದೇಶದಿಂದ 2 ರಿಂದ 10ನೇ ತರಗತಿ ವಿದ್ಯಾರ್ಥಿಗಳು ಈ ಯೋಜನೆಯಿಂದ ಹೊರ ಉಳಿಯುವಂತಾಗಿದೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.
ಅನುದಾನ ಕೊರತೆ ನೆಪವೊಡ್ಡಿ ವಿದ್ಯಾರ್ಥಿಗಳ ಶಿಷ್ಯ ವೇತನ ಕಡಿತಗೊಳಿಸುವುದು ಸರಿಯಲ್ಲ. ರಾಜ್ಯದ ಅನೇಕ ಬಡ ವಿದ್ಯಾರ್ಥಿಗಳಿಗೆ ಸರ್ಕಾರದ ಆದೇಶದಿಂದ ಹೊರೆಯಾಗುತ್ತದೆ ಎಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಕಳವಳ ವ್ಯಕ್ತಪಡಿಸಿದರು.