ಕರ್ನಾಟಕ

karnataka

ETV Bharat / state

ಪದವಿಯ ಎಲ್ಲಾ ವಿದ್ಯಾರ್ಥಿಗಳಿಗೆ ಲ್ಯಾಪ್​ಟಾಪ್ ನೀಡುವಂತೆ ಮನವಿ - ವಿಜಯಪುರ ಜಿಲ್ಲಾಧಿಕಾರಿ ವೈ. ಎಸ್. ಪಾಟೀಲ್

ಸರ್ಕಾರಿ ಕಾಲೇಜುಗಳಲ್ಲಿ ಪದವಿ ವ್ಯಾಸಂಗ ನಡೆಸುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ, ಲ್ಯಾಪ್‌ಟಾಪ್ ನೀಡುವಂತೆ ಜಿಲ್ಲಾಧಿಕಾರಿಗೆ ಸರ್ಕಾರಿ ಪದವಿ ಕಾಲೇಜು ವಿದ್ಯಾರ್ಥಿಗಳು ಮನವಿ ಸಲ್ಲಿಸಿದರು.

students-protest-in-vijayapura
ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ವಿದ್ಯಾರ್ಥಿಗಳು

By

Published : Jan 13, 2020, 5:31 PM IST

ವಿಜಯಪುರ:ಸರ್ಕಾರಿ ಕಾಲೇಜುಗಳಲ್ಲಿ ಪದವಿ ವ್ಯಾಸಂಗ ನಡೆಸುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ, ಲ್ಯಾಪ್‌ಟಾಪ್ ನೀಡುವಂತೆ ಜಿಲ್ಲಾಧಿಕಾರಿಗೆ ಸರ್ಕಾರಿ ಪದವಿ ಕಾಲೇಜು ವಿದ್ಯಾರ್ಥಿಗಳು ಮನವಿ ಸಲ್ಲಿಸಿದರು.

ಈ ಹಿಂದಿನ ಸರ್ಕಾರದ ಆಡಳಿತ ಅವಧಿಯಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ಗಳನ್ನು ನೀಡುತ್ತೇವೆ ಎಂದು ಕಳೆದ ವರ್ಷ ಯೋಜನೆ ಜಾರಿಗೆ ತಂದಿದ್ದಾರೆ. ಆದರೆ ಇದೀಗ ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಮಾತ್ರ ಲ್ಯಾಪ್‌ಟಾಪ್ ವಿತರಣೆ ಮಾಡುತ್ತಿದೆ ಎಂದು ವಿದ್ಯಾರ್ಥಿಗಳು ಅಸಮಧಾನ ಹೊರ ಹಾಕಿದರು.

ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ವಿದ್ಯಾರ್ಥಿಗಳು

ಬಳಿಕ ಈ ಕುರಿತು ಪದವಿಯ ಅಂತಿಮ ವರ್ಷದವರಿಗೂ ಎಲ್ಲಾ ವಿದ್ಯಾರ್ಥಿಗಳಿಗೆ ಸರ್ಕಾರ ಉಚಿತವಾಗಿ ಲ್ಯಾಪ್‌ಟಾಪ್ ನೀಡುಬೇಕೆಂದು ಜಿಲ್ಲಾಧಿಕಾರಿ ವೈ. ಎಸ್. ಪಾಟೀಲ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ABOUT THE AUTHOR

...view details