ವಿಜಯಪುರ: ರಾಜ್ಯದಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ತಾರಕಕ್ಕೇರುತ್ತಿದೆ. ಇದೀಗ ವಿಜಯಪುರ ಜಿಲ್ಲೆಯ ಇಂಡಿಯಲ್ಲಿ ಹಿಜಾಬ್ ವಿರೋಧಿಸಿ ಕೇಸರಿ ಶಾಲು ಹಾಕಿಕೊಂಡು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸಿದ್ದಾರೆ.
ವಿಜಯಪುರ ಜಿಲ್ಲೆ ಇಂಡಿ ಪಟ್ಟಣದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಶಾಂತೇಶ್ವರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಕೇಸರಿ ಶಾಲು ಹಾಕಿಕೊಂಡು ಇಂದು ಕಾಲೇಜಿಗೆ ಎಂಟ್ರಿ ಕೊಟ್ಟಿದ್ದಾರೆ.
ಉಡುಪಿ ಕಾಲೇಜಿನಲ್ಲಿ ಹಿಜಾಬ್ ವಿವಾದ ಭುಗಿಲೆದ್ದ ಬಳಿಕ ಹಿಜಾಬ್-ಕೇಸರಿ ಶಾಲು ವಿವಾದ ದೇಶಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಆ ಬಳಿಕ ಸರ್ಕಾರ ಕಟ್ಟು ನಿಟ್ಟಿನ ಆದೇಶ ಹೊರಡಿಸಿ, ನಿಗದಿಪಡಿಸಿದ ಸಮವಸ್ತ್ರ ಕಡ್ಡಾಯಗೊಳಿಸಿತ್ತು. ಆದ್ರೂ ಕೂಡ ಕೆಲ ಕಾಲೇಜುಗಳಲ್ಲಿ ಸರ್ಕಾರದ ಆದೇಶ ಉಲ್ಲಂಘನೆಯಾಗುತ್ತಿದೆ.
(ಇದನ್ನೂ ಓದಿ: ಸರ್ಕಾರಿ ಶಾಲೆಗಳಲ್ಲಿ ನಿಗದಿಪಡಿಸಿದ ಸಮವಸ್ತ್ರ ಬಳಕೆ ಕಡ್ಡಾಯಗೊಳಿಸಿ ಸರ್ಕಾರದ ಖಡಕ್ ಆದೇಶ)