ವಿಜಯಪುರ: ಶಾರ್ಟ್ ಸರ್ಕ್ಯೂಟ್ ನಿಂದ ಕಬ್ಬು ಬೆಳೆಗೆ ಬೆಂಕಿ ತಗುಲಿರುವ ಘಟನೆ ವಿಜಯಪುರ ತಾಲೂಕಿನ ಹಂಚಿನಾಳ ಪಿಎಚ್ ಗ್ರಾಮದಲ್ಲಿ ನಡೆದಿದೆ. ಸುಮಾರು 20 ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಯ ಕೆನ್ನಾಲಿಗೆಗೆ ಸಂಪೂರ್ಣ ನಾಶವಾಗಿದೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟರು.
ಶಾರ್ಟ್ ಸರ್ಕ್ಯೂಟ್ ನಿಂದ ಕಬ್ಬಿನ ಗದ್ದೆಗೆ ಬಂಕಿ; ಲಕ್ಷಾಂತರ ರೂ. ಮೌಲ್ಯದ ಕಬ್ಬಿಗೆ ಹಾನಿ - ಕಬ್ಬಿನ ಬೆಳೆಗೆ ಬೆಂಕಿ
ಕಬ್ಬು ಬೆಳೆಗೆ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಮೌಲ್ಯದ ಕಬ್ಬು ಹಾನಿಯಾಗಿರುವ ಘಟನೆ ವಿಜಯಪುರ ತಾಲೂಕಿನ ಹಂಚಿನಾಳ ಪಿಎಚ್ ಗ್ರಾಮದಲ್ಲಿ ನಡೆದಿದೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡಬೇಕಾಯಿತು.
ಶಾರ್ಟ್ ಸರ್ಕ್ಯೂಟ್ ನಿಂದ ಕಬ್ಬಿನ ಗದ್ದೆಗೆ ಬಂಕಿ; ಲಕ್ಷಾಂತರ ರೂ. ಮೌಲ್ಯದ ಕಬ್ಬಿಗೆ ಹಾನಿ
ಜಮೀನಿನಲ್ಲಿದ್ದ ವಿದ್ಯುತ್ ಕಂಬದಿಂದ ಈ ಅವಘಡ ಸಂಭವಿಸಿದೆ. ರೈತ ದುಂಡಪ್ಪ ದೊಡ್ಡಮನಿ ಎಂಬುವರಿಗೆ ಸೇರಿದ ಕಬ್ಬು ತೋಟ ಇದಾಗಿದೆ. ಇನ್ನೇನು ಕಟಾವಿಗೆ ಬಂದಿದ್ದ ಕಬ್ಬು ಸಂಪೂರ್ಣ ಬೆಂಕಿಗಾಹುತಿಯಾಗಿದೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.