ವಿಜಯಪುರ:ವಿಜಯಪುರ-ಬಾಗಲಕೋಟೆ ಅವಳಿ ಜಿಲ್ಲೆಯ ದ್ವಿಸದಸ್ಯ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ಎಂ.ಬಿ.ಪಾಟೀಲ ಸಹೋದರ ಸುನೀಲಗೌಡ ಪಾಟೀಲ ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ.
ಈ ಬಾರಿಯ ಚುನಾವಣೆಗೆ ಕಾಂಗ್ರೆಸ್ ಹಾಗೂ ಬಿಜೆಪಿ ಒಂದೊಂದು ಸ್ಥಾನದಲ್ಲಿ ಸ್ಪರ್ಧೆ ನಡೆಸಲು ನಿರ್ಧರಿಸಿದ ಬೆನ್ನಲ್ಲೇ ಕಾಂಗ್ರೆಸ್ ಟಿಕೆಟ್ಗಾಗಿ ಎಸ್.ಆರ್.ಪಾಟೀಲ್ ಹಾಗೂ ಸುನೀಲಗೌಡ ಪಾಟೀಲ ನಡುವೆ ತೀವ್ರ ಪೈಪೋಟಿ ನಡೆದಿತ್ತು. ಕಳೆದ ಬಾರಿಯ ವಿಧಾನ ಪರಿಷತ್ ಚುನಾವಣೆಯಲ್ಲಿ ಎಸ್.ಆರ್.ಪಾಟೀಲ್ ಕೊನೆಯ ಬಾರಿ ಚುನಾವಣೆ ಎದುರಿಸಲಿದ್ದಾರೆ ಎನ್ನುವ ಮಾತು ಕೇಳಿ ಬಂದಿತ್ತು. ಆದರೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದ ಬಸನಗೌಡ ಪಾಟೀಲ ಯತ್ನಾಳ್ ಜಯ ಗಳಿಸಿದ್ದರು.
ಕಾಂಗ್ರೆಸ್ ಅಭ್ಯರ್ಥಿಗಳ ವಿವರ ನಂತರ ಬದಲಾದ ರಾಜಕೀಯ ಬೆಳವಣಿಗೆಯಲ್ಲಿ ಬಸನಗೌಡ ಪಾಟೀಲ ಯತ್ನಾಳ್ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿ 2018 ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿದು ಜಯ ಸಾಧಿಸಿದ್ದರು. ತೆರವಾದ ಪರಿಷತ್ ಸದಸ್ಯ ಸ್ಥಾನಕ್ಕೆ ಸುನೀಲಗೌಡ ಪಾಟೀಲ ಸ್ಪರ್ಧೆ ಮಾಡಿ ಜಯಗಳಿಸುವ ಮೂಲಕ ರಾಜಕೀಯಕ್ಕೆ ಎಂಟ್ರಿಯಾಗಿದ್ದರು.
ಈಗ ಮತ್ತೊಮ್ಮೆ ವಿಧಾನ ಪರಿಷತ್ ಚುನಾವಣೆ ಎದುರಾಗಿದ್ದು, ಈ ಬಾರಿ ಎಸ್.ಆರ್.ಪಾಟೀಲ ಅವರನ್ನು ಕಡೆಗಣಿಸಿ ಸುನೀಲ್ಗೌಡ ಪಾಟೀಲ್ಗೆ ಕಾಂಗ್ರೆಸ್ ಹೈಕಮಾಂಡ್ ಮಣೆ ಹಾಕಿದೆ. ಪ್ರತಿ ಬಾರಿ ಬಾಗಲಕೋಟೆ ಜಿಲ್ಲೆಯವರೆಗೆ ಕಾಂಗ್ರೆಸ್ ಟಿಕೆಟ್ ನೀಡುತ್ತದೆ ಎಂಬ ಆಪಾದನೆಯಿಂದ ಪಾರಾಗಲು ಮುಂದಾಗಿದೆ.
ಇದನ್ನೂ ಓದಿ: ಪರಿಷತ್ ಚುನಾವಣೆ: ಕೊನೆಗೂ ಕಾಂಗ್ರೆಸ್ನಿಂದ 17 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ