ವಿಜಯಪುರ: ಪುಲ್ವಾಮ ದಾಳಿಯಲ್ಲಿ ವೀರಮರಣ ಹೊಂದಿದ ಜಿಲ್ಲೆಯ ಯೋಧ ಕಾಶಿರಾಯ ಬೊಮ್ಮನಹಳ್ಳಿ ಕುಟುಂಬವನ್ನು ವಿಧಾನಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಭೇಟಿಯಾಗಿ ಯೋಧನ ಪತ್ನಿಗೆ ಉದ್ಯೋಗ ನೀಡುವ ಭರವಸೆ ನೀಡಿದರು.
ಹುತಾತ್ಮ ಯೋಧನ ಕುಟುಂಬಕ್ಕೆ ಉದ್ಯೋಗ ಕೊಡಿಸುವ ಭರವಸೆ ನೀಡಿದ ಸುನೀಲಗೌಡ ಪಾಟೀಲ - Sunil Gowda Patil visited martyred soldiers home
ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದ ಹುತಾತ್ಮ ಯೋಧ ಕಾಶಿರಾಯ ಬೊಮ್ಮನಹಳ್ಳಿ ಕುಟುಂಬದವರನ್ನು ವಿಧಾನಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಭೇಟಿ ಮಾಡಿ ಸಾಂತ್ವನ ಹೇಳಿದರು.
ಹುತಾತ್ಮ ಯೋಧನ ಕುಟುಂಬ
ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದ ಹುತಾತ್ಮ ಯೋಧ ಕಾಶಿರಾಯ ಬೊಮ್ಮನಹಳ್ಳಿ ಕುಟುಂಬದವರನ್ನು ಭೇಟಿ ಮಾಡಿ, ಸಾಂತ್ವನ ಹೇಳಿದ ಸುನೀಲಗೌಡ ಪಾಟೀಲ ಅವರು, ಯೋಧನ ಪತ್ನಿ ಸಂಗೀತಾ ಬೊಮ್ಮನಹಳ್ಳಿಗೆ ಬಿಎಲ್ಡಿಇ ಸಂಸ್ಥೆಯಲ್ಲಿ ಉದ್ಯೋಗ ಕೊಡಿಸುವ ಭರವಸೆ ನೀಡಿದರು. ಜೊತೆಗೆ ಮಕ್ಕಳ ಶಿಕ್ಷಣಕ್ಕೆ ನೆರವು ನೀಡುವುದಾಗಿ ತಿಳಿಸಿದರು. ನಂತರ ಯೋಧನ ಅಂತ್ಯಕ್ರಿಯೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಶ್ರದ್ಧಾಂಜಲಿ ಸಲ್ಲಿಸಿದರು.