ಕರ್ನಾಟಕ

karnataka

ETV Bharat / state

ತಾಳಿಕೋಟೆ ಮಿನಿವಿಧಾನಸೌಧ ನಿರ್ಮಾಣಕ್ಕೆ ಅಗತ್ಯ ನೆರವು: ಆರ್. ಅಶೋಕ್ - Talikoti mini vidhansouda news

ತಾಳಿಕೋಟೆಯಲ್ಲಿ ಮಿನಿವಿಧಾನಸೌಧ ಸ್ಥಾಪನೆಗೆ ಅಗತ್ಯ ನೆರವು ನೀಡಲಾಗುತ್ತದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದರು.

R Ashok visits place of Vijayapura road
R Ashok visits place of Vijayapura road

By

Published : Aug 26, 2020, 7:49 PM IST

ಮುದ್ದೇಬಿಹಾಳ: ನೂತನ ತಾಲೂಕು ತಾಳಿಕೋಟೆಗೆ ಸಂಬಂಧಿಸಿದಂತೆ ಎಲ್ಲಾ ಇಲಾಖೆಗಳನ್ನು ಒಂದೇ ಸೂರಿನಡಿ ತರುವ ಮಿನಿವಿಧಾನಸೌಧ ಸ್ಥಾಪನೆಗೆ ಅಗತ್ಯ ನೆರವು ನೀಡಲಾಗುತ್ತದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದರು.

ತಾಳಿಕೋಟೆ ಪಟ್ಟಣದಲ್ಲಿ ಮಿನಿವಿಧಾನಸೌಧದ ನಿರ್ಮಾಣಕ್ಕೆಂದು ಗುರುತಿಸಿರುವ ವಿಜಯಪುರ ರಸ್ತೆಯ 10 ಎಕರೆ ಜಾಗಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕರ್ನಾಟಕ ಆಹಾರ ಮತ್ತು ನಾಗರಿಕ ಪೂರೈಕೆ ನಿಗಮದ ಅಧ್ಯಕ್ಷ, ಶಾಸಕ ಎ.ಎಸ್. ಪಾಟೀಲ(ನಡಹಳ್ಳಿ) ಮಾತನಾಡಿ, ತಾಳಿಕೋಟೆ ಪಟ್ಟಣವು ತಾಲೂಕು ಕೇಂದ್ರವಾಗಿ ಅಸ್ತಿತ್ವಕ್ಕೆ ಬಂದಿದ್ದರಿಂದ ತಾಲೂಕಾಡಳಿತದ ಎಲ್ಲಾ ಕಚೇರಿಗಳು ಒಂದೆಡೆ ಆರಂಭಿಸಬೇಕೆಂಬ ಉದ್ದೇಶದಿಂದ ಮಿನಿ ವಿಧಾನಸೌಧ ನಿರ್ಮಾಣಕ್ಕಾಗಿ 10 ಎಕರೆ ಜಮೀನನ್ನು ಗುರುತಿಸಲಾಗಿದೆ. ಸರ್ಕಾರದಿಂದ ಅಗತ್ಯ ಹಣಕಾಸಿನ ಬಿಡುಗಡೆಗೆ ಸಚಿವರ ಮೂಲಕ ಸಿಎಂ ಬಳಿ ಮನವಿ ಮಾಡುವುದಾಗಿ ತಿಳಿಸಿದರು.

ಈ ವೇಳೆ ಕರ್ನಾಟಕ ನಗರ ಒಳಚರಂಡಿ ಮಂಡಳಿ ನಿಗಮದ ಅಧ್ಯಕ್ಷ, ಶಾಸಕ ರಾಜುಗೌಡ ನರಸಿಂಹ್ ನಾಯಕ, ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್. ಪಾಟೀಲ (ಕೂಚಬಾಳ), ಜಿಪಂ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ಉಪ ವಿಭಾಗಾಧಿಕಾರಿ ಸೋಮಲಿಂಗ ಗೆಣ್ಣೂರ, ತಹಶೀಲ್ದಾರ್ ಅನಿಲಕುಮಾರ ಢವಳಗಿ, ಮುಖ್ಯಾಧಿಕಾರಿ ಸಿ.ವಿ. ಕುಲಕರ್ಣಿ, ಪುರಸಭೆ ಸದಸ್ಯರು ಇದ್ದರು.

ABOUT THE AUTHOR

...view details