ವಿಜಯಪುರ:ವಿಜಯಪುರ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ಆರೋಗ್ಯವಾಗಿದ್ದಾರೆ. ಶ್ರೀಗಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಭಕ್ತರು ಯಾರೂ ಸಹ ಈ ಬಗ್ಗೆ ಆತಂಕಪಡಬಾರದು ಎಂದು ಸುತ್ತೂರು ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿಯವರು ಹೇಳಿದ್ದಾರೆ.
ವಿಜಯಪುರದಲ್ಲಿ ಸುತ್ತೂರು ಶ್ರೀಗಳು ಸಿದ್ದೇಶ್ವರ ಸ್ವಾಮೀಜಿ ಅವರನ್ನು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದೇಶ್ವರ ಶ್ರೀಗಳ ಆರೋಗ್ಯ ಚೆನ್ನಾಗಿದೆ. ಶ್ರೀಗಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಕೆಲ ಗಂಟೆಗಳ ಬಳಿಕ ಮತ್ತೊಮ್ಮೆ ವೈದ್ಯರು ಮಾಹಿತಿ ಹಂಚಿಕೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.