ವಿಜಯಪುರ :ತಳವಾರ-ಪರಿವಾರ ಸಮುದಾಯದವರನ್ನು ಪರಿಶಿಷ್ಟ ಪಂಗಡದ ಪಟ್ಟಿಯಲ್ಲಿ ಸೇರಿಸಲು ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಆದರೆ, ಪ್ರಮಾಣ ಪತ್ರ ವಿತರಣೆ ಆಗದಿರುವುದು ಕಳವಳಕಾರಿ ಸಂಗತಿ. ಈ ಕುರಿತು ಅಧಿವೇಶನದಲ್ಲಿ ಚರ್ಚೆ ನಡೆಸಿ, ಹೋರಾಟ ಮಾಡುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಹೇಳಿದರು.
ತಳವಾರ-ಪರಿವಾರ ಸಮುದಾಯದ ಪರ ಹೋರಾಡಿ ನ್ಯಾಯ ಕೊಡಿಸ್ತೇವೆ- ಸುನೀಲ್‌ಗೌಡ ಪಾಟೀಲ್ - ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ
ನೀವು ನಿಮ್ಮ ಹಕ್ಕನ್ನು ಕೇಳುತ್ತಿದ್ದೀರಿ. ಅವುಗಳನ್ನು ಈಡೇರಿಸಲು ನಮ್ಮ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಹಾಗೂ ಎಂ ಬಿ ಪಾಟೀಲ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ತೀವ್ರ ಒತ್ತಡ ಹೇರಲಿದೆ..
ಮಾಜಿ ಸಚಿವ ಎಂ ಬಿ ಪಾಟೀಲ ನಿವಾಸದ ಮುಂದೆ ತಳವಾರ ಸಮುದಾಯದಿಂದ ನಡೆಸಿದ ಧರಣಿಯಲ್ಲಿ ಮನವಿ ಸ್ವೀಕರಿಸಿ ಮಾತನಾಡಿದ ಅವರು, ನೀವು ನಿಮ್ಮ ಹಕ್ಕನ್ನು ಕೇಳುತ್ತಿದ್ದೀರಿ. ಅವುಗಳನ್ನು ಈಡೇರಿಸಲು ನಮ್ಮ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಹಾಗೂ ಎಂ ಬಿ ಪಾಟೀಲ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ತೀವ್ರ ಒತ್ತಡ ಹೇರಲಿದೆ ಎಂದರು.
ತಳವಾರ ಸಮುದಾಯದ ಮುಖಂಡ ಹಾಗೂ ಮಾಜಿ ಶಾಸಕ ಶರಣಪ್ಪ ಸುಣಗಾರ ಮಾತನಾಡಿ, ನಮ್ಮ ಸಮಾಜ ಆರ್ಥಿಕವಾಗಿ-ಸಾಮಾಜಿಕವಾಗಿ ಅತೀ ಹಿಂದುಳಿದಿದೆ. ರಾಜ್ಯ ಸರ್ಕಾರ ಪ್ರಮಾಣ ಪತ್ರ ವಿಳಂಬ ನೀತಿ ಅನುಸರಿಸುತ್ತಿದೆ. ಕೂಡಲೇ ಸಮುದಾಯಕ್ಕೆ ಪ್ರಮಾಣಪತ್ರ ನೀಡಲು ಮುಂಬರುವ ಮಳೆಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ನಮ್ಮ ಪರವಾಗಿ ತಾವು ಧ್ವನಿ ಎತ್ತಿ ನ್ಯಾಯ ದೊರಕಿಸಿ ಕೊಡಬೇಕು ಎಂದು ಒತ್ತಾಯಿಸಿದರು.