ವಿಜಯಪುರ:ಪ್ರವಾಹ ಪರಿಹಾರ ಕುರಿತು ಕೇಂದ್ರದ ನೆರವು ಅಗತ್ಯವಿಲ್ಲ ಎಂದು ಹೇಳಿ ವಿವಾದ ಸೃಷ್ಟಿಸಿದ್ದ ಸಂಸದ ತೇಜಸ್ವಿ ಸೂರ್ಯ ಹೇಳಿಕೆ ಸಂಬಂಧ ಬೆಳಗಾವಿ ಗ್ರಾಮಾಂತರ ಮಾಜಿ ಶಾಸಕ ಸಂಜಯ ಪಾಟೀಲ ಸ್ಪಷ್ಟನೆ ನೀಡಿದ್ದಾರೆ.
ತೇಜಸ್ವಿ ಸೂರ್ಯ ಆ ರೀತಿಯ ಹೇಳಿಕೆ ನೀಡಿಲ್ಲ: ಸಂಜಯ್ ಪಾಟೀಲ್ ಸ್ಪಷ್ಟನೆ - ಮಾಜಿ ಶಾಸಕ ಸಂಜಯ ಪಾಟೀಲ
ಪ್ರವಾಹ ಪರಿಹಾರ ಕುರಿತು ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ನೀಡಿದ ಹೇಳಿಕೆ ಸಂಬಂಧ ಬೆಳಗಾವಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಸಂಜಯ ಪಾಟೀಲ ಪ್ರತಿಕ್ರಿಯಿಸಿದ್ರು.
ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸಂಸದ ತೇಜಸ್ವಿ ಸೂರ್ಯ ಜೊತೆಯಲ್ಲೇ ಇದ್ದೆ. ಅವರು ಆ ರೀತಿಯ ಹೇಳಿಕೆ ನೀಡಿಲ್ಲ, ಹೇಳಿಕೆಗೆ ಬೇರೆ ಅರ್ಥ ಕಲ್ಪಿಸಲಾಗಿದೆ ಎಂದರು.
ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಇಡಿ ವಿಚಾರಣೆಗೆ ಒಳಪಡಿಸಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಅದು ಅವರ ವೈಯಕ್ತಿಕ ವಿಚಾರ. ಈ ಹಿಂದೆ ನಡೆದಿರುವ ಸೋಲಾರ್ ಹಗರಣದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಹೆಸರು ಕೇಳಿ ಬಂದಿರುವ ಕುರಿತು ಪಕ್ಷದ ಮುಖಂಡ ಸಿ.ಟಿ.ರವಿ ದಾಖಲೆ ಬಿಡುಗಡೆ ಮಾಡಿದ್ದರು. ಆದರೆ, ಅದರಿಂದ ಯಾವ ಪರಿಣಾಮವೂ ಬೀರಿಲ್ಲ. ಹೆಬ್ಬಾಳ್ಕಕರ ವೈಯಕ್ತಿಕ ವಿಷಯ ಕುರಿತು ಯಾವುದೇ ಹೋರಾಟವಾಗಲಿ, ಪ್ರತಿಕ್ರಿಯೆ ನೀಡುವುದಿಲ್ಲ. ಆದರೆ, ಕ್ಷೇತ್ರದ ವಿಚಾರದಲ್ಲಿ ಜನರಿಗೆ ಅನ್ಯಾಯವಾದರೆ ಬೀದಿಗಿಳಿದು ಹೋರಾಡುವುದಾಗಿ ಹೇಳಿದ್ರು.