ವಿಜಯಪುರ:ಜಿಲ್ಲೆಯ ತಿಕೋಟಾ ತಾಲೂಕಿನ ಕಳ್ಳಕವಟಗಿ ಗ್ರಾಮದ ತೋಟವೊಂದರ ಬಾವಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾದ ಘಟನೆ ನಡೆದಿದೆ.
ತೋಟದ ಬಾವಿಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ - undefined
ತಿಕೋಟಾ ತಾಲೂಕಿನ ಕಳ್ಳಕವಟಗಿ ಗ್ರಾಮದ ತೋಟವೊಂದರ ಬಾವಿಯಲ್ಲಿ ಸುಮಾರು 30 ವರ್ಷ ವಯಸ್ಸಿನ ಪುರುಷನ ಶವ ಪತ್ತೆಯಾಗಿದ್ದು, ಸಾವಿಗೆ ಕಾರಣ ಇನ್ನೂ ಪತ್ತೆಯಾಗಿಲ್ಲ.
ತೋಟದ ಬಾವಿಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ
ತೋಟದ ಬಾವಿಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ
ನಾಗಪ್ಪ ಗಗನಮಾಲಿ ಎಂಬುವವರಿಗೆ ಸೇರಿದ ಬಾವಿಯಲ್ಲಿ ಶವ ಪತ್ಎಯಾಗಿದ್ದು, ಸುಮಾರು 30 ವರ್ಷ ವಯಸ್ಸಿನ ಪುರುಷನ ಶವ ಎಂದು ಅಂದಾಜಿಸಲಾಗಿದೆ. ಈತ ಈಜಲು ಹೋಗಿ ಅಥವಾ ಆತ್ಮಹತ್ಯೆ ಮಾಡಿಕೊಳ್ಳಲು ಬಾವಿಗೆ ಹಾರಿರುವ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ.
ಇನ್ನೂ ಈತ ಎರಡು ದಿನಗಳ ಹಿಂದೆ ಬಾವಿಗೆ ಹಾರಿರಬಹುದು ಎಂದು ಅಂದಾಜಿಸಲಾಗಿದೆ. ಇಂದು ಶವ ಬಾವಿಯಲ್ಲಿ ತೇಲುತ್ತಿರುವಾಗ ತೋಟದ ಮಾಲೀಕರು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಿಕೋಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.