ಕರ್ನಾಟಕ

karnataka

ETV Bharat / state

ಇಂಡಿಯಲ್ಲಿ ಸಿಡಿಲು ಬಡಿದು ಧಗ ಧಗನೆ ಹೊತ್ತಿ ಉರಿದ ತೆಂಗಿನ ಮರ - undefined

ಸಿಡಿಲು ಬಡಿದು ತೆಂಗಿನ ಮರಕ್ಕೆ ಬೆಂಕಿ ಹೊತ್ತಿಕೊಂಡ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಗೋಟ್ಯಾಳ ಗ್ರಾಮದಲ್ಲಿ ನಡೆದಿದೆ.

ಸಿಡಿಲು ಬಡಿದು ಹೊತ್ತಿ ಉರಿಯುತ್ತಿರುವ ತೆಂಗಿನ ಮರ

By

Published : Apr 5, 2019, 8:22 AM IST

ವಿಜಯಪುರ:ಸಿಡಿಲು ಬಡಿದು ತೆಂಗಿನ ಮರಕ್ಕೆ ಬೆಂಕಿ ಹೊತ್ತಿಕೊಂಡ ಘಟನೆ ಜಿಲ್ಲೆಯ ಇಂಡಿ ತಾಲೂಕಿನ ಗೋಟ್ಯಾಳ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಶಂಭುಲಿಂಗ ಪಾಟೀಲ್ ಎಂಬುವರ ಮನೆ ಮುಂದಿನ ತೆಂಗಿನ ಮರಕ್ಕೆ ಸಿಡಿಲು ಬಡಿದ ಪರಿಣಾಮ ಬೆಂಕಿ ಹೊತ್ತಿಕೊಂಡಿದೆ. ನಿನ್ನೆ ಜಿಲ್ಲೆಯಾದ್ಯಂತ ಗಾಳಿ, ಗುಡುಗು ಸಹಿತ ಮಳೆಯಾಗಿದೆ.

ಸಿಡಿಲು ಬಡಿದು ಹೊತ್ತಿ ಉರಿಯುತ್ತಿರುವ ತೆಂಗಿನ ಮರ

ಇನ್ನು ಈ ತೆಂಗಿನ ಮರದ ಪಕ್ಕದಲ್ಲಿ ವಿದ್ಯುತ್ ಕಂಬ ಹಾದು ಹೋಗಿದ್ದು, ಅದೃಷ್ಟವಶಾತ್ ಯಾವುದೇ ಅಪಾಯ ಆಗಿಲ್ಲ. ಗ್ರಾಮದ ಮಧ್ಯ ಭಾಗದಲ್ಲಿ ಸಿಡಿಲು ಹೊಡೆದು ಮರಕ್ಕೆ ಬೆಂಕಿ ಹೊತ್ತಿಕೊಂಡಿದ್ದರಿಂದ ಗ್ರಾಮಸ್ಥರು ಈ ದೃಶ್ಯವನ್ನು ತಮ್ಮ ಮೊಬೈಲ್​​​ನಲ್ಲಿ ಸೆರೆ ಹಿಡಿದಿದ್ದಾರೆ.

For All Latest Updates

TAGGED:

ABOUT THE AUTHOR

...view details