ಕರ್ನಾಟಕ

karnataka

ETV Bharat / state

ರಾಜ್ಯ ಸರ್ಕಾರ ಎಲ್ಲ ವರ್ಗಗಳಿಗೆ ನ್ಯಾಯ ಒದಗಿಸಿದೆ; ಸಚಿವೆ ಜೊಲ್ಲೆ

ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ನಿಗದಿತ ಬಿಲ್ ನೀಡುವ ಕುರಿತಂತೆ ಶೀಘ್ರದಲ್ಲಿಯೇ ರಾಜ್ಯ ಸರ್ಕಾರದಿಂದ ಆದೇಶ ಹೊರಬೀಳಲಿದೆ. ಈಗಾಗಲೆ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚೆ ನಡೆದಿದ್ದು, ಇದಕ್ಕೆ ಶಾಶ್ವತ ಪರಿಹಾರವೊಂದು ದೊರೆತು ಸಾರ್ವಜನಿಕರಿಂದ ಹೆಚ್ಚಿನ ಚಿಕಿತ್ಸಾ ವೆಚ್ಚ ಪಡೆಯುತ್ತಿರುವ ದೂರುಗಳಿಗೆ ಕಡಿವಾಣ ಬೀಳಲಿದೆ ಎಂದು ತಿಳಿಸಿದರು.

ಸಚಿವೆ ಶಶಿಕಲಾ ಜೊಲ್ಲೆ
ಸಚಿವೆ ಶಶಿಕಲಾ ಜೊಲ್ಲೆ

By

Published : Jul 27, 2020, 8:10 PM IST

ವಿಜಯಪುರ: ಬರ, ಮಹಾಪೂರ ಹಾಗೂ ಕೋವಿಡ್‍ಗಳಂಥ ಸಂಕಷ್ಟದ ಪರಿಸ್ಥಿತಿಗಳಲ್ಲಿ ರಾಜ್ಯ ಸರ್ಕಾರ ಎಲ್ಲ ವರ್ಗಗಳಿಗೆ ನ್ಯಾಯ ಒದಗಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರ್ಕಾರದ ಒಂದು ವರ್ಷದ ಸಾಧನೆ ಹಿನ್ನೆಲೆ ವಿವಿಧ ಫಲಾನುಭವಿಗಳೊಂದಿಗೆ ನಡೆದ ಮುಖ್ಯಮಂತ್ರಿಗಳ ಸಂವಾದ ಕಾರ್ಯಕ್ರಮದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಎಲ್ಲ ಯೋಜನೆಗಳು ಅತ್ಯುತ್ತಮವಾಗಿವೆ. ಬರ, ಮಹಾಪೂರ ಹಾಗೂ ಕೋವಿಡ್‍ಗಳಂತಹ ಪರಿಸ್ಥಿತಿಗಳಲ್ಲಿಯೂ ಎಲ್ಲ ವರ್ಗಗಳಿಗೆ ಸರ್ಕಾರ ನ್ಯಾಯ ಒದಗಿಸಿದೆ ಎಂದರು.

ಸಚಿವೆ ಶಶಿಕಲಾ ಜೊಲ್ಲೆ

ರಾಜ್ಯದ ಜನತೆಗೆ ಒಳ್ಳೆಯ ಆಡಳಿತ ನೀಡಲು ರಾಜ್ಯ ಸರ್ಕಾರ ಬದ್ಧವಾಗಿದೆ. ಕೋವಿಡ್ ಸಂಕಷ್ಟದ ಪರಿಸ್ಥಿತಿಯಲ್ಲಿ ಜನರಿಗೆ ಸ್ಪಂದಿಸುವ ಕಾರ್ಯ ಪರಿಣಾಮಕಾರಿಯಾಗಿ ಮಾಡಿದ್ದು, ಜಿಲ್ಲೆಯ 9 ಖಾಸಗಿ ಆಸ್ಪತ್ರೆಗಳು ಕೋವಿಡ್ ಚಿಕಿತ್ಸೆಗೆ ಮುಂದೆ ಬಂದಿವೆ. ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ನಿಗದಿತ ಬಿಲ್ ನೀಡುವ ಕುರಿತಂತೆ ಶೀಘ್ರದಲ್ಲಿಯೇ ರಾಜ್ಯ ಸರ್ಕಾರದಿಂದ ಆದೇಶ ಹೊರಬೀಳಲಿದೆ. ಈಗಾಗಲೆ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚೆ ನಡೆದಿದ್ದು, ಇದಕ್ಕೆ ಶಾಶ್ವತ ಪರಿಹಾರವೊಂದು ದೊರೆತು ಸಾರ್ವಜನಿಕರಿಂದ ಹೆಚ್ಚಿನ ಚಿಕಿತ್ಸಾ ವೆಚ್ಚ ಪಡೆಯುತ್ತಿರುವ ದೂರುಗಳಿಗೆ ಕಡಿವಾಣ ಬೀಳಲಿದೆ ಎಂದು ತಿಳಿಸಿದರು.

ಇಂದು ರಾಜ್ಯ ಸರ್ಕಾರದ ಒಂದು ವರ್ಷದ ಸಾಧನೆಯ ಹಿನ್ನೆಲೆಯಲ್ಲಿ ವರ್ಚುವಲ್ ಪ್ಲ್ಯಾಟ್ ಫಾರಂ ಮೂಲಕ ಸರ್ಕಾರದ ವಿವಿಧ ಯೋಜನೆಯಡಿ ಸೌಲಭ್ಯ ಪಡೆದಿರುವ ಫಲಾನುಭವಿಗಳು, ಕೋವಿಡ್ ಗುಣಮುಖರಾದವರು ಹಾಗೂ ನೆರೆ ಸಂತ್ರಸ್ತರಿಗೆ ಒದಗಿಸಿರುವ ಸೌಲಭ್ಯಗಳ ಕುರಿತು ಸಂವಾದ ನಡೆಸುವ ಮೂಲಕ ಸಾರ್ವಜನಿಕರೊಂದಿಗೆ ಸರ್ಕಾರ ಬೆನ್ನೆಲುಬಾಗಿ ನಿಂತಿದೆ ಎಂದರು.

ABOUT THE AUTHOR

...view details