ವಿಜಯಪುರ: ಕೊರೊನಾ ಎಮರ್ಜೆನ್ಸಿ ಹಿನ್ನೆಲೆಯಲ್ಲಿ ಇಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಹಾಗೂ ಎಸ್ಪಿ ಅನುಪಮ್ ಅಗರವಾಲ್ ಚಡಚಣ ತಾಲೂಕಿನ ಧೂಳಖೇಡ ಗ್ರಾಮದ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಭೇಟಿ ನೀಡಿ ವಾಹನಗಳನ್ನು ಪರಿಶೀಲನೆ ನಡೆಸಿದರು.
ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಧೂಳಖೇಡ ಗ್ರಾಮದ ಮೂಲಕ ವಾಹನಗಳು ಸಾಗುತ್ತಿದ್ದು, ಮುಂಜಾಗ್ರತಾ ಕ್ರಮಮವಾಗಿ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಹಾಗೂ ಎಸ್ಪಿ ಅನುಪಮ್ ಅಗರವಾಲ್ ಧೂಳಖೇಡ ಚೆಕ್ ಪೋಸ್ಟ್ಗೆ ಭೇಟಿ ನೀಡಿದ್ದು, ಸರಕು ಸಾಗಣೆ ಬಿಟ್ಟು ಮಹಾರಾಷ್ಟ್ರದಿಂದ ಜಿಲ್ಲೆಗೆ ಆಗಮಿಸುವ ಎಲ್ಲಾ ವಾಹನಗಳನ್ನು ತಡೆದು ಪರಿಶೀಲನೆ ನಡಸಿ ವಾಪಸ್ ಕಳಿಸುವ ಕಾರ್ಯಕ್ಕೆ ಜಿಲ್ಲಾಡಳಿತ ಮುಂದಾಗಿದೆ.