ವಿಜಯಪುರ: ರಾತ್ರಿ ವೇಳೆ ಎರಡು ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಸೇರಿದಂತೆ 60 ಸಾವಿರ ನಗದು ದೋಚಿಕೊಂಡು ಪರಾರಿಯಾಗಿರುವ ಘಟನೆ ಜಿಲ್ಲೆಯ ಬಬಲೇಶ್ವರ ತಾಲೂಕಿನ ಹಲಗಣಿ ಗ್ರಾಮದಲ್ಲಿ ನಡೆದಿದೆ.
ಮನೆಗಳ್ಳತನ: ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಖದೀಮರು ಪರಾರಿ - Babaleshwar Taluk
ಬಬಲೇಶ್ವರ ತಾಲೂಕಿನ ಹಲಗಣಿ ಗ್ರಾಮದಲ್ಲಿರುವ ಎರಡು ಮನೆಗಳಿಗೆ ನುಗ್ಗಿ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಸೇರಿದಂತೆ 60 ಸಾವಿರ ರೂ. ನಗದು ದೋಚಿಕೊಂಡು ಪರಾರಿಯಾಗಿದ್ದಾರೆ.
theft
ಹಲಗಣಿ ಗ್ರಾಮದ ಲಕ್ಷ್ಮಿ ಮಲ್ಲಪ್ಪ ಗುಣದಾಳ ಮನೆಯಲ್ಲಿ ಎರಡು ತೊಲ ಚಿನ್ನ ಹಾಗೂ ಬೆಲೆಬಾಳುವ ವಸ್ತುಗಳನ್ನು ಕಳ್ಳತನ ಮಾಡಿದ್ದಾರೆ. ಮತ್ತು ರಾಮನಗೌಡ ಬಿರಾದಾರ ಎಂಬುವರ ಮನೆಯಲ್ಲಿ ಒಂದು ತೊಲ ಚಿನ್ನ ಹಾಗೂ 60 ಸಾವಿರ ರೂ. ನಗದು ಕಳ್ಳತನವಾಗಿದೆ. ರಾತ್ರಿ ಮನೆಯವರೆಲ್ಲ ಟೆರಸ್ ಮೇಲೆ ಮಲಗಿದ ವೇಳೆ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ.
ಇನ್ನು ಈ ಕುರಿತು ಸ್ಥಳಕ್ಕೆ ಬಬಲೇಶ್ವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.