ವಿಜಯಪುರ:ಬಿಜೆಪಿಯಲ್ಲಿ ಯಾವುದೂ ಸರಿಯಿಲ್ಲ ಎಂಬ ಕಾರಣಕ್ಕೆ ಸ್ವಯಂ ಪ್ರೇರಿತವಾಗಿ ಜಿಲ್ಲಾ ಪಂಚಾಯತ್ ಅಧ್ಯಕ್ಷೀಯ ಚುನಾವಣೆಯಲ್ಲಿ ಬಿಜೆಪಿಯ 4 ಸದಸ್ಯರು ನಮ್ಮ ಪಕ್ಷಕ್ಕೆ ಬೆಂಬಲ ನೀಡಿದ್ದಾರೆ ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುಜಾತಾ ಕಳ್ಳಿಮನಿ ಹೇಳಿದ್ದಾರೆ.
ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಮೊರಟಗಿ ಕ್ಷೇತ್ರದ ಜಿಲ್ಲಾ ಪಂಚಾಯತ್ ಸದಸ್ಯ ಬಿಂದುರಾಯಗೌಡ ಪಾಟೀಲ್ಗೆ ಸ್ಥಾಯಿ ಸಮಿತಿ ಅಧ್ಯಕ್ಷರನ್ನಾಗಿ ಮಾಡಲು ಬಿಜೆಪಿಯಲ್ಲಿ 20 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು, ಇದರಿಂದಾಗಿ ಅವರಿಗೆ ಅನ್ಯಾಯವಾಗಿ ನಮ್ಮ ಪಕ್ಷಕ್ಕೆ ಬಂದಿದ್ದಾರೆ ಎಂದು ಬಿಂದುರಾಯಗೌಡ ಪಾಟೀಲ್ ಮಾತನಾಡಿದ ವಿಡಿಯೋ ಬಿಡುಗಡೆ ಮಾಡಿದರು. ಇನ್ನು ಬಿಜೆಪಿಯಲ್ಲಿ ಸದಸ್ಯರಿಗೆ ಬೆಳೆಯಲು ಬಿಡುತ್ತಿಲ್ಲ ಎಂದು ನಮ್ಮ ಪಕ್ಷಕ್ಕೆ ಬೆಂಬಲ ನೀಡಿದ್ದಾರೆ ಎಂದು ಸಮರ್ಥಿಸಿಕೊಂಡರು.